ಚಿತ್ರದುರ್ಗ ಜಿಲ್ಲೆಯಲ್ಲಿ ಪೌರಕಾರ್ಮಿಕ ಹುದ್ದೆಗಳ ನೇಮಕಾತಿ – Chitradurga Pourakarmika Recruitment 2024

Chitradurga Pourakarmika Recruitment 2024 : ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಪೌರಕಾರ್ಮಿಕ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Chitradurga Pourakarmika Recruitment 2024 : Details of Vacancies

ಹುದ್ದೆ : ಪೌರಕಾರ್ಮಿಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ, ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು, ನಾಯಕನಹಟ್ಟಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹುದ್ದೆಗಳು ಖಾಲಿ ಇದೆ.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 26 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ನಗರ ಸ್ಥಳೀಯ ಸಂಸ್ಥೆಹುದ್ದೆಗಳ ಸಂಖ್ಯೆ
ನಗರಸಭೆ, ಚಿತ್ರದುರ್ಗ 8
ನಗರಸಭೆ ಹಿರಿಯೂರು 6
ಪುರಸಭೆ ಹೊಸದುರ್ಗ 3
ಪುರಸಭೆ ಹೊಳಲ್ಕೆರೆ 3
ಪಟ್ಟಣ ಪಂಚಾಯಿತಿ ಮೊಳಕಾಲ್ಮೂರು 3
ಪಟ್ಟಣ ಪಂಚಾಯಿತಿ ನಾಯಕನಹಟ್ಟಿ 3

ಅರ್ಹತೆಗಳು : ಈ ಹುದ್ದೆಗಳಿಗೆ ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಚಿತ್ರದುರ್ಗ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಿ:07.08.2017ರ ಪೂರ್ವದಲ್ಲಿ ನೇಮಕಾತಿ ಹೊಂದಿ ಪ್ರಸ್ತುತ ನೇರಪಾವತಿಯಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು ಮಾತ್ರ ಅರ್ಜಿಗಳನ್ನು ಸಲ್ಲಿಸತಕ್ಕದ್ದು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಕಾರ್ಯ ನಿರ್ವಹಿಸುತ್ತಿರಬೇಕು.

ಉದ್ಯೋಗ ಮಾಹಿತಿ : ರೈಲ್ವೆ ಇಲಾಖೆ ನೇಮಕಾತಿ 2024

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರ್ಣಗೊಂಡಿರಬೇಕು ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 27,000 ರಿಂದ ರೂ. 47,675 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಸಂಬಂಧಿಸಿದ ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿ ಇವರಿಂದ ಅಪ್ಲಿಕೇಷನ್ ಫಾರ್ಮ್ ಪಡೆದುಕೊಳ್ಳಬೇಕು.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಚಿತ್ರದುರ್ಗ

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 06, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 05, 2024

Chitradurga Pourakarmika Recruitment 2024 : Important Links

NOTIFICATIONCLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment