ಆಯುಷ್ ಇಲಾಖೆ ನೇಮಕಾತಿ 2024 – Bagalkot Ayush Department Recruitment 2024

Bagalkot Ayush Department Recruitment 2024 : ರಾಷ್ಟ್ರೀಯ ಆಯುಷ್ ಅಭಿಯಾನದಡಿ ಬಾಗಲಕೋಟೆ ಜಿಲ್ಲೆಯಲ್ಲಿ ಖಾಲಿ ಇರುವ ಆಯುಷ್ ತಜ್ಞ ವೈದ್ಯರು/ ಅರೆ ವೈದ್ಯಕೀಯ ಸಿಬ್ಬಂದಿಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bagalkot Ayush Department Recruitment 2024 : Details of Vacancies

ಹುದ್ದೆ : ತಜ್ಞ ವೈದ್ಯರು, ಔಷಧ ವಿತರಕರು, ಮಸಾಜಿಸ್ಟ್ (ಪುರುಷ), ಮಸಾಜಿಸ್ಟ್ (ಮಹಿಳೆ), ಕ್ಷಾರಸೂತ್ರ ಅಟೆಂಡರ್, ಬಹು ಉದ್ದೇಶಿತ ಆರೋಗ್ಯ ಕಾರ್ಯಕರ್ತ.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬಾಗಲಕೋಟೆ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 13 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ತಜ್ಞ ವೈದ್ಯರು4
ಔಷಧ ವಿತರಕರು3
ಮಸಾಜಿಸ್ಟ್ (ಪುರುಷ)1
ಮಸಾಜಿಸ್ಟ್ (ಮಹಿಳೆ)2
ಕ್ಷಾರಸೂತ್ರ ಅಟೆಂಡರ್2
ಬಹು ಉದ್ದೇಶಿತ ಆರೋಗ್ಯ ಕಾರ್ಯಕರ್ತ1

ಶೈಕ್ಷಣಿಕ ಅರ್ಹತೆ :
ತಜ್ಞ ವೈದ್ಯರು – ಎಂ.ಎಸ್ ಇನ್ ಶಲ್ಯತಂತ್ರ/ ಎಂ.ಎಸ್ ಇನ್ ಪಂಚಕರ್ಮ/ ಕಾಯಚಿಕಿತ್ಸಾ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.

ಔಷಧ ವಿತರಕರು – ಬಿ.ಫಾರ್ಮಾ ಪದವಿಯ ಜೊತೆಗೆ ಆಸ್ಪತ್ರೆ/ ಚಿಕಿತ್ಸಾಲಯ/ ಫಾರ್ಮಸಿಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರಬೇಕು. ಬಿ.ಫಾರ್ಮಾ ಅಭ್ಯರ್ಥಿಯು ದೊರೆಯದ ಪಕ್ಷದಲ್ಲಿ ಕನಿಷ್ಠ 2 ವರ್ಷ ಅನುಭವವಿರುವ ಡಿ.ಫಾರ್ಮಾ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿರುತ್ತದೆ.

ಉದ್ಯೋಗ ಮಾಹಿತಿ : ಜಿಲ್ಲಾ ಪಂಚಾಯತ್ ನೇಮಕಾತಿ 2024

ಮಸಾಜಿಸ್ಟ್ – ಕನಿಷ್ಠ 10ನೇ ತರಗತಿ, ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಕನಿಷ್ಠ 2 ವರ್ಷ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರಬೇಕು.

ಕ್ಷಾರಸೂತ್ರ ಅಟೆಂಡರ್ – ಕನಿಷ್ಠ 10ನೇ ತರಗತಿ ಹಾಗೂ ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಕನಿಷ್ಠ 2 ವರ್ಷ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರಬೇಕು.

ಬಹು ಉದ್ದೇಶಿತ ಆರೋಗ್ಯ ಕಾರ್ಯಕರ್ತ – ಕನಿಷ್ಠ 10ನೇ ತರಗತಿ ಹಾಗೂ ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಕನಿಷ್ಠ 1 ವರ್ಷ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಕಡ್ಡಾಯವಾಗಿರುತ್ತದೆ.

ವಯಸ್ಸಿನ ಮೀತಿ : ದಿನಾಂಕ 18/12/2024ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 41 ವರ್ಷ
• ಎಸ್ಸಿ, ಎಸ್ಟಿ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ

ವೇತನ :

ಹುದ್ದೆವೇತನ
ತಜ್ಞ ವೈದ್ಯರು57550
ಔಷಧ ವಿತರಕರು27550
ಮಸಾಜಿಸ್ಟ್ (ಪುರುಷ)18500
ಮಸಾಜಿಸ್ಟ್ (ಮಹಿಳೆ)18500
ಕ್ಷಾರಸೂತ್ರ ಅಟೆಂಡರ್18500
ಬಹು ಉದ್ದೇಶಿತ ಆರೋಗ್ಯ ಕಾರ್ಯಕರ್ತ16900

ಆಯ್ಕೆ ವಿಧಾನ : ಮಸಾಜಿಸ್ಟ್ ಮತ್ತು ಕ್ಷಾರಸೂತ್ರ ಅಟೆಂಡೆಂಟ್ ಹುದ್ದೆಗಳಿಗೆ ಪ್ರಾಯೋಗಿಕವಾಗಿ (ಪ್ರಾಕ್ಟಿಕಲ್) ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ತಜ್ಞ ವೈದ್ಯರು ಮತ್ತು ಇತರೆ ಹುದ್ದೆಗಳಿಗೆ ನಿಗದಿಪಡಿಸಲಾದ ಶೈಕ್ಷಣಿಕ ಅರ್ಹತೆಯಲ್ಲಿ ಪಡೆದ ಅಂಕಗಳು, ಸಂದರ್ಶನ ಮತ್ತು ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಐಟಿಬಿಪಿ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 19, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 18, 2024

Bagalkot Ayush Department Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment