ಏರ್‌ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾ ನೇಮಕಾತಿ 2023 – AAI Junior Assistant Recruitment 2023 Apply Online at aai.aero

AAI Junior Assistant Recruitment 2023 : ಏರ್‌ಪೋರ್ಟ್‌ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಅಗತ್ಯ ಇರುವ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

AAI Junior Assistant Recruitment 2023 : Details of Vacancies

ಹುದ್ದೆ : ಜೂನಿಯರ್ ಅಸಿಸ್ಟೆಂಟ್ (ಫೈರ್ ಸರ್ವಿಸ್), ಜೂನಿಯರ್ ಅಸಿಸ್ಟೆಂಟ್ (ಆಫೀಸ್), ಸೀನಿಯರ್ ಅಸಿಸ್ಟೆಂಟ್ (ಇಲೆಕ್ಟ್ರಾನಿಕ್ಸ್), ಸೀನಿಯರ್ ಅಸಿಸ್ಟೆಂಟ್ (ಅಕೌಂಟ್ಸ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 119 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ ವೇತನ
ಜೂನಿಯರ್ ಅಸಿಸ್ಟೆಂಟ್ (ಫೈರ್ ಸರ್ವಿಸ್)7331000-92000
ಜೂನಿಯರ್ ಅಸಿಸ್ಟೆಂಟ್ (ಆಫೀಸ್)231000-92000
ಸೀನಿಯರ್ ಅಸಿಸ್ಟೆಂಟ್ (ಇಲೆಕ್ಟ್ರಾನಿಕ್ಸ್)2536000-110000
ಸೀನಿಯರ್ ಅಸಿಸ್ಟೆಂಟ್ (ಅಕೌಂಟ್ಸ್)1936000-110000

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಜೂನಿಯರ್ ಅಸಿಸ್ಟೆಂಟ್ (ಫೈರ್ ಸರ್ವಿಸ್) – 10ನೇ ತರಗತಿ ಜೊತೆಗೆ 3 ವರ್ಷಗಳ ಡಿಪ್ಲೊಮಾ (ಮೆಕ್ಯಾನಿಕಲ್/ ಆಟೋಮೊಬೈಲ್/ ಫೈರ್) ಅಥವಾ 12ನೇ ತರಗತಿ ಹಾಗೂ ಲಘು/ ಭಾರಿ ವಾಹನ ಚಾಲನಾ ಪರವಾನಗಿ ಹೊಂದಿರಬೇಕು.
• ಜೂನಿಯರ್ ಅಸಿಸ್ಟೆಂಟ್ (ಆಫೀಸ್) – ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
• ಸೀನಿಯರ್ ಅಸಿಸ್ಟೆಂಟ್ (ಇಲೆಕ್ಟ್ರಾನಿಕ್ಸ್) – ಡಿಪ್ಲೊಮಾ (ಇಲೆಕ್ಟ್ರಾನಿಕ್ಸ್/ ಟೆಲಿಕಮ್ಯುನಿಕೇಷನ್/ ರೇಡಿಯೋ ಇಂಜಿನಿಯರಿಂಗ್)
• ಸೀನಿಯರ್ ಅಸಿಸ್ಟೆಂಟ್ (ಅಕೌಂಟ್ಸ್) – ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಿತಿ : ದಿನಾಂಕ 20 ಡಿಸೆಂಬರ್ 2023ಕ್ಕೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ (ಕಂಪ್ಯೂಟರ್ ಆಧಾರಿತ ಪರೀಕ್ಷೆ) ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಪರೀಕ್ಷಾ ಕೇಂದ್ರಗಳು : ಚೆನೈ, ಮದುರೈ, ಬೆಳಗಾಂ, ಬೆಂಗಳೂರು, ಕ್ಯಾಲಿಕಟ್, ಕೊಚ್ಚಿನ್, ಹೈದರಾಬಾದ್, ವಿಜಯವಾಡ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ
• ಉಳಿದ ಅಭ್ಯರ್ಥಿಗಳಿಗೆ – ರೂ. 1000

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಡಿಸೆಂಬರ್ 27, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜನವರಿ 26, 2024

AAI Junior Assistant Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment