
Agriculture Department Kodagu Recruitment 2026 : ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷೋನ್ನತಿ ಕೃಷಿ ವಿಸ್ತರಣೆ ಉಪ ಅಭಿಯಾನ (ಆತ್ಮ) ಯೋಜನೆಯಡಿ ಅಗತ್ಯವಿರುವ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅನುಭವ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Agriculture Department Kodagu Recruitment 2026 : Details of Vacancies
ಹುದ್ದೆ :
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು (BTM), ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕೊಡಗು ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 06 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು (BTM) | 2 |
| ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM) | 4 |
ಶೈಕ್ಷಣಿಕ ಅರ್ಹತೆ :
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು –
ಎಂ.ಎಸ್ಸಿ (ಕೃಷಿ/ ತೋಟಗಾರಿಕೆ/ ಮೀನುಗಾರಿಕೆ/ ಅರಣ್ಯ/ ರೇಷ್ಮೆ)
ಸಹಾಯಕ ತಾಂತ್ರಿಕ ವ್ಯವಸ್ಥಾಪಕರು –
ಬಿ.ಎಸ್ಸಿ/ ಎಂ.ಎಸ್ಸಿ (ಕೃಷಿ/ ತೋಟಗಾರಿಕೆ/ ಮೀನುಗಾರಿಕೆ/ ಅರಣ್ಯ/ ರೇಷ್ಮೆ)
ಉದ್ಯೋಗ ಮಾಹಿತಿ : ಶಿವಮೊಗ್ಗ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ 2026
ವಯೋಮಿತಿ :
ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ಮೀರಿರಬಾರದು.
ವೇತನ :
| ಹುದ್ದೆ | ವೇತನ |
| ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು (BTM) | ರೂ. 30,000/- |
| ಸಹಾಯಕ ತಾಂತ್ರಿಕ ವ್ಯವಸ್ಥಾಪಕರು (ATM) | ರೂ. 25,000/- |
ಅನುಭವ :
ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರು –
ಕನಿಷ್ಠ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಂ.ಎಸ್. ಆಫೀಸ್ ನಲ್ಲಿ ಪರಿಣಿತಿ ಹೊಂದಿರಬೇಕು.
ಸಹಾಯಕ ತಾಂತ್ರಿಕ ವ್ಯವಸ್ಥಾಪಕರು –
ಕನಿಷ್ಠ 1 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಂ.ಎಸ್. ಆಫೀಸ್ ನಲ್ಲಿ ಪರಿಣಿತಿ ಹೊಂದಿರಬೇಕು.
ಉದ್ಯೋಗ ಮಾಹಿತಿ : ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಅಭ್ಯರ್ಥಿಗಳು ಅರ್ಜಿ ಹಾಗೂ ಅಗತ್ಯ ದಾಖಲೆಗಳನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
ಜಂಟಿ ಕೃಷಿ ನಿರ್ದೇಶಕರ ಕಛೇರಿ, ಕೆ.ಎಸ್.ಎಫ್.ಸಿ ಕಟ್ಟಡ, ಕೊಡಗು ಜಿಲ್ಲೆ, ಮಡಿಕೇರಿ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
• ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 18, 2026
• ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 31, 2026
Agriculture Department Kodagu Recruitment 2026 : Important Links
| NOTIFICATION | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.