AHVS Karnataka Recruitment 2022 – Apply Online for 250 Junior Veterinary inspector Posts

AHVS Karnataka Recruitment 2022 : ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

AHVS Karnataka Recruitment 2022 : Details of Vacancies

ಹುದ್ದೆ : ಕಿರಿಯ ಪಶುವೈದ್ಯಕೀಯ ಪರೀಕ್ಷಕರು (ಪಶು ವೈದ್ಯಕೀಯ ಸಹಾಯಕರು)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 250 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಕರ್ನಾಟಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ವಿಶ್ವವಿದ್ಯಾಲಯದಿಂದ ನೀಡುತ್ತಿರುವ ಪಶು ಆರೋಗ್ಯ (ಪಶು ಸಂಗೋಪನೆ) ಡಿಪ್ಲೊಮಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ನಿರ್ದೇಶಕರು ವೃತ್ತಿ ಶಿಕ್ಷಣ, ಕರ್ನಾಟಕ ಸರ್ಕಾರವು ನಡೆಸಲಾದ ಡೈರಿ/ ಪೌಲ್ಟ್ರಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್ (ಜೆ.ಒ.ಸಿ ಇನ್ ಡೈರಿ/(ಪೌಲ್ಟ್ರಿ) ಕುಕ್ಕುಟ) ರಲ್ಲಿ ಉತ್ತೀರ್ಣರಾಗಿರಬೇಕು.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ಜಲ ಸಂಪನ್ಮೂಲ ಇಲಾಖೆಯಲ್ಲಿ ಎಸ್.ಡಿ.ಎ ಹುದ್ದೆಗಳ ನೇರ ನೇಮಕಾತಿ 2022

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ,
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇರ ನೇಮಕಾತಿ 2022

ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ ಅರ್ಹತೆ, ಪ್ರವರ್ಗ 2ಎ, 2ಬಿ, 3ಎ, 3ಬಿಗೆ ಸೇರಿದ ಅಭ್ಯರ್ಥಿಗಳು – ರೂ. 750
ಎಸ್ಸಿ, ಎಸ್ಟಿ, ಪ್ರ 1, ವಿಶೇಷ ಚೇತನ ಅಭ್ಯರ್ಥಿಗಳು – ರೂ. 500

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಚಲನ್ ಡೌನ್ಲೋಡ್ ಮಾಡಿ ಇ-ಅಂಚೆ ಕಚೇರಿ ಮೂಲಕ ಶುಲ್ಕ ಪಾವತಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 05, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 04, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ನವೆಂಬರ್ 06, 2022

AHVS Karnataka Recruitment 2022 : Important Links

NotificationClick Here
Apply Online Click Here ಅಕ್ಟೋಬರ್ 05 ರಿಂದ ಪ್ರಾರಂಭ

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment