ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ನೇಮಕಾತಿ 2024 – AHVS Karnataka Recruitment 2024

AHVS Karnataka Recruitment 2024 : ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

AHVS Karnataka Recruitment 2024 : Details of Vacancies

ಹುದ್ದೆ : ಪಶುವೈದ್ಯಾಧಿಕಾರಿಗಳು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 400 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲಾದ ಯಾವುದೇ ಪಶುವೈದ್ಯಕೀಯ ವಿಜ್ಞಾನ ವಿಶ್ವವಿದ್ಯಾಲಯ ಅಥವಾ ಕೃಷಿ ವಿಶ್ವವಿದ್ಯಾಲಯದಿಂದ ಬಿ.ವಿ.ಎಸ್ಸಿ/ ಬಿ.ವಿ.ಎಸ್ಸಿ ಅಂಡ್ ಎಹೆಚ್ ಪದವಿಯನ್ನು ಪಡೆದಿರಬೇಕು ಹಾಗೂ ಕರ್ನಾಟಕ ಪಶುವೈದ್ಯಕೀಯ ಪರಿಷತ್ತಿನ ಕಾಯ್ದೆ 1984ರ ಅಡಿಯಲ್ಲಿ ಕೆ.ವಿ.ಸಿ ನೊಂದಣಿಯಾಗಿರಬೇಕು.

ಉದ್ಯೋಗ ಮಾಹಿತಿ : ಕರ್ನಾಟಕ ಗ್ರಾಮೀಣ ಬ್ಯಾಂಕುಗಳಲ್ಲಿ ನೇಮಕಾತಿ 2024

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 52,640 ವೇತನ ನೀಡಲಾಗುತ್ತದೆ.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ಅಭ್ಯರ್ಥಿಗಳು ಪದವಿಯಲ್ಲಿ ಎಲ್ಲಾ ವರ್ಷಗಳಲ್ಲಿ ಗಳಿಸಿದ ಒಟ್ಟು ಶೇಕಡಾವಾರು ಅಂಕಗಳ ಅರ್ಹತೆ ಆಧಾರದ ಮೇಲೆ ಹಾಗೂ ಸರ್ಕಾರದ ಮೀಸಲಾತಿಗನುಗುಣವಾಗಿ ನಡೆಸಲಾಗುವುದು.

ಉದ್ಯೋಗ ಮಾಹಿತಿ : ಗಡಿ ಭದ್ರತಾ ಪಡೆಯಲ್ಲಿ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 14, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 24, 2024

AHVS Karnataka Recruitment 2024 : Important Links

NOTIFICATIONCLICK HERE
APPLY ONLINE CLICK HERE ಜೂನ್ 14 ರಿಂದ ಪ್ರಾರಂಭ
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment