ಆಡಳಿತ ತರಬೇತಿ ಸಂಸ್ಥೆ ಮೈಸೂರು ನೇಮಕಾತಿ 2024 – ATI Mysore Recruitment 2024

ATI Mysore Recruitment 2024 : ಆಡಳಿತ ತರಬೇತಿ ಸಂಸ್ಥೆ, ಮೈಸೂರು ಇಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ಗ್ರೂಪ್-ಡಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

ATI Mysore Recruitment 2024 : Details of Vacancies

ಹುದ್ದೆ : ಬೆರಳಚ್ಚುಗಾರರು, ಗ್ರೂಪ್-ಡಿ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮೈಸೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 2 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಬೆರಳಚ್ಚುಗಾರರು121400-42000
ಗ್ರೂಪ್-ಡಿ117000-28950

ಶೈಕ್ಷಣಿಕ ಅರ್ಹತೆ :
ಬೆರಳಚ್ಚುಗಾರರು – ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಮತ್ತು ಕನ್ನಡ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಹಿರಿಯ ಬೆರಳಚ್ಚು ಪರೀಕ್ಷೆಯನ್ನು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅಥವಾ ಕನ್ನಡ ಬೆರಳಚ್ಚಿನೊಂದಿಗೆ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟಿಸ್ ಅಥವಾ ತತ್ಸಮಾನ ವಿದ್ಯಾರ್ಹತೆ ತೇರ್ಗಡೆಯಾಗಿರತಕ್ಕದ್ದು.

ಗ್ರೂಪ್ ಡಿ – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯನ್ನು ತೇರ್ಗಡೆಯಾಗಿರತಕ್ಕದ್ದು.

ಉದ್ಯೋಗ ಮಾಹಿತಿ : ಮಂಡ್ಯ ಡಿಸಿಸಿ ಬ್ಯಾಂಕ್ ನೇಮಕಾತಿ 2024

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.

ಆಯ್ಕೆ ವಿಧಾನ :
ಬೆರಳಚ್ಚುಗಾರ ಹುದ್ದೆಗೆ ಅರ್ಹತಾದಾಯಕ ಪರೀಕ್ಷೆಗಳಲ್ಲಿ ಪಡೆದಿರುವ ಶೇಕಡವಾರು ಅಂಕಗಳ ಆಧಾರದ ಮೇಲೆ ಕೌಶಲ್ಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಗ್ರೂಪ್-ಡಿ ಹುದ್ದೆಗೆ ಅರ್ಹತಾದಾಯಕ ಪರೀಕ್ಷೆಗಳಲ್ಲಿ ಪಡೆದಿರುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಅಂಗನವಾಡಿ ಟೀಚರ್ ಹುದ್ದೆಗಳ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 16, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 15, 2024

ATI Mysore Recruitment 2024 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment