Ayush Department Hassan Recruitment 2023 – Apply for 18 Specialist Doctor, Multi Purpose Worker, CHO and Various Posts

Ayush Department Hassan Recruitment 2023 : ಕೇಂದ್ರಪುರಸ್ಕೃತ ಯೋಜನೆಯಡಿ ಮೇಲ್ದರ್ಜೆಗೇರಿಸಲಾದ ಆಸ್ಪತ್ರೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Ayush Department Hassan Recruitment 2023 : Details of Vacancies

ಹುದ್ದೆ : ತಜ್ಞ ವೈದ್ಯರು (ಆಯುರ್ವೇದ), ತಜ್ಞ ವೈದ್ಯರು (ಯೋಗ & ಪ್ರಕೃತಿ ಚಿಕಿತ್ಸೆ), ಔಷಧಿ ವಿತರಕರು, ಮಸಾಜಿಸ್ಟ್, ಕ್ಷಾರಸೂತ್ರ ಅಟೆಂಡೆಂಟ್, ಸ್ತ್ರೀರೋಗ ಅಟೆಂಡೆಂಟ್, ಮಲ್ಲಿಪರ್ಪಸ್ ವರ್ಕರ್, ಸಮುದಾಯ ಆರೋಗ್ಯ ಅಧಿಕಾರಿ.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹಾಸನ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಅಗತ್ಯವಿರುವ 18 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ತಜ್ಞ ವೈದ್ಯರು (ಆಯುರ್ವೇದ)235000
ತಜ್ಞ ವೈದ್ಯರು (ಯೋಗ & ಪ್ರಕೃತಿ ಚಿಕಿತ್ಸೆ)135000
ಔಷಧಿ ವಿತರಕರು715821
ಮಸಾಜಿಸ್ಟ್311356
ಕ್ಷಾರಸೂತ್ರ ಅಟೆಂಡೆಂಟ್111356
ಸ್ತ್ರೀರೋಗ ಅಟೆಂಡೆಂಟ್111356
ಮಲ್ಲಿಪರ್ಪಸ್ ವರ್ಕರ್110300
ಸಮುದಾಯ ಆರೋಗ್ಯ ಅಧಿಕಾರಿ225000

ಶೈಕ್ಷಣಿಕ ಅರ್ಹತೆ :
• ತಜ್ಞ ವೈದ್ಯರು (ಆಯುರ್ವೇದ) – ಬಿ.ಎ.ಎಂ.ಎಸ್ ಜೊತೆಗೆ ಶಲ್ಯ ತಂತ್ರ/ ಪಂಚಕರ್ಮ/ ಕಾಯಚಿಕಿತ್ಸಾ ವೈದ್ಯಕೀಯ ವಿಷಯದಲ್ಲಿ ಸ್ನಾತಕೋತ್ತರ ಪದವಿ.

• ತಜ್ಞ ವೈದ್ಯರು (ಯೋಗ & ಪ್ರಕೃತಿ ಚಿಕಿತ್ಸೆ) – ಪ್ರಕೃತಿ ಚಿಕಿತ್ಸೆ & ಯೋಗ ವೈದ್ಯಕೀಯ ವಿಷಯದಲ್ಲಿ ಸ್ನಾತಕೋತ್ತರ ಪದವಿ ಹೊಂದಿರಬೇಕು.

• ಔಷಧಿ ವಿತರಕರು – ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ & ಔಷಧಿ ವಿಜ್ಞಾನದಲ್ಲಿ ಡಿಪ್ಲೊಮಾ ಪದವಿ ಹೊಂದಿರಬೇಕು.

• ಮಸಾಜಿಸ್ಟ್ – ಕನಿಷ್ಠ 7ನೇ ತರಗತಿ ಹಾಗೂ ಆಯುಷ್‌ ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಮಸಾಜಿಸ್ಟ್‌ಗಳಾಗಿ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರತಕ್ಕದ್ದು.

• ಕ್ಷಾರಸೂತ್ರ ಅಟೆಂಡೆಂಟ್ & ಸ್ತ್ರೀರೋಗ ಅಟೆಂಡೆಂಟ್ – ಕನಿಷ್ಠ 10ನೇ ತರಗತಿ ಹಾಗೂ ಆಯುಷ್ ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರತಕ್ಕದ್ದು.

• ಮಲ್ಟಿಪರ್ಪಸ್ ವರ್ಕರ್ – ಕನಿಷ್ಠ 10 ನೇ ತರಗತಿ ಹೊಂದಿರಬೇಕು.

• ಸಮುದಾಯ ಆರೋಗ್ಯ ಅಧಿಕಾರಿ – ಆಯುರ್ವೇದ ವೈದ್ಯಕೀಯ ವಿಜ್ಞಾನದಲ್ಲಿ ಪದವಿ (ಬಿ.ಎ.ಎಂ.ಎಸ್)

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ1, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

ಉದ್ಯೋಗ ಮಾಹಿತಿ : ಹಾಲು ಉತ್ಪಾದಕರ ಒಕ್ಕೂಟದಲ್ಲಿ ನೇಮಕಾತಿ 2023

ಆಯ್ಕೆ ವಿಧಾನ : ವಿದ್ಯಾರ್ಹತೆಯಲ್ಲಿ ಪಡೆದಿರುವ ಎಲ್ಲಾ ಪರೀಕ್ಷೆಗಳ ಅಂಕಗಳನ್ನು ಒಟ್ಟುಗೂಡಿಸಿ ಶೇಕಡಾವಾರು ಅಂಕಗಳಿಗೆ ಲೆಕ್ಕ ಮಾಡಿ ಮೆರಿಟ್ ಹಾಗೂ ಮೀಸಲಾತಿಯನ್ವಯ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ, ಹೊಸಲೈನ್ ರಸ್ತೆ, ಹಾಸನ – 573201

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 20, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 19, 2023

Ayush Department Hassan Recruitment 2023 : Important Links

NOTIFICATION CLICK HERE
APPLICATION FORM CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment