Ayush Department Karnataka Recruitment 2021 – Apply Now 07 Post

Ayush Department Karnataka Recruitment 2021 : ಜಿಲ್ಲಾ ಆಯುಷ್ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Ayush Department Karnataka Recruitment 2021 : Details of Vacancies

ಹುದ್ದೆ :
• ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು – 01 ಹುದ್ದೆ
ಶೈಕ್ಷಣಿಕ ಅರ್ಹತೆ – ಅಂಗೀಕೃತ ವಿಶ್ವವಿದ್ಯಾಲಯದ ಆಯುಷ್ ಪದವಿ, ಎಂಬಿಎ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಯಾವುದೇ ಪದವಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ಅನುಭವ – ಕನಿಷ್ಠ 3 ವರ್ಷ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಅನುಭವ ಹೊಂದಿರತಕ್ಕದ್ದು.
• ಔಷಧಿ ವಿತರಕರು – 02 ಹುದ್ದೆ
ಶೈಕ್ಷಣಿಕ ಅರ್ಹತೆ – ಎಸ್.ಎಸ್‌.ಎಲ್.ಸಿ ಮತ್ತು ಔಷಧಿ ವಿಜ್ಞಾನದಲ್ಲಿ ಡಿಪ್ಲೋಮಾ ಪದವಿ ಹೊಂದಿರಬೇಕು.
• ಮಲ್ಟಿಪರ್ಪಸ್ ವರ್ಕರ್ – 03 ಹುದ್ದೆ
ಶೈಕ್ಷಣಿಕ ಅರ್ಹತೆ – 10ನೇ ತರಗತಿ ಹಾಗೂ ಆರೋಗ್ಯ & ಆಯುಷ್ ಇಲಾಖೆ ಬಗ್ಗೆ ಸಾಮಾನ್ಯ ಜ್ಞಾನ ಹೊಂದಿರಬೇಕು.
• ಸ್ತ್ರೀರೋಗ ಅಟೆಂಡೆಂಟ್ – 01 ಹುದ್ದೆ
ಶೈಕ್ಷಣಿಕ ಅರ್ಹತೆ – 10ನೇ ತರಗತಿ ಹಾಗೂ ಆಯುಷ್ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರಬೇಕು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಅಗತ್ಯವಿರುವ 07 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೇತನ :

ಹುದ್ದೆವೇತನ
ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ30,000
ಔಷಧಿ ವಿತರಕರು14,350
ಮಲ್ಟಿಪರ್ಪಸ್ ವರ್ಕರ್10,300
ಸ್ತ್ರೀರೋಗ ಅಟೆಂಡೆಂಟ್10,300

ವಯೋಮಾನ : ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು ಹುದ್ದೆಗೆ ಗರಿಷ್ಠ 45 ವರ್ಷ ಹಾಗೂ ಉಳಿದ ಹುದ್ದೆಗಳಿಗೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿ

ಆಯುಷ್ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ತಮ್ಮ ಬಯೋಡೇಟಾ, ಭಾವಚಿತ್ರ, ದೃಢೀಕೃತ ಪ್ರಮಾಣ ಪತ್ರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಕಛೇರಿಗೆ ಖುದ್ದಾಗಿ ಹಾಜರಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಆಯುಷ್ ಅಧಿಕಾರಿಗಳ ಕಛೇರಿ,
ಸಾಲುಮರದಮ್ಮ ದೇವಸ್ಥಾನದ ಎದುರು, ಕಡೂರು ರಸ್ತೆ, ಚಿಕ್ಕಮಗಳೂರು

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 26, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 16, 2021

Ayush Department Karnataka Recruitment 2021 : Important Links

ಅಧಿಸೂಚನೆ : Click Here

ಹೆಚ್ಚಿನ ಮಾಹಿತಿಗಾಗಿ ಕಚೇರಿ ಅವಧಿಯಲ್ಲಿ 08262-220722ಗೆ ಸಂಪರ್ಕಿಸುವುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.