Ayush Department Karnataka Recruitment 2023 : ರಾಷ್ಟ್ರೀಯ ಆಯುಷ್ ಅಭಿಯಾನದಡಿ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Ayush Department Karnataka Recruitment 2023 : Details of Vacancies
ಹುದ್ದೆ : ತಜ್ಞ ವೈದ್ಯರು ಯುನಾನಿ, ತಜ್ಞ ವೈದ್ಯರು ಆಯುರ್ವೇದ, ಔಷಧ ವಿತರಕರು, ಮಸಾಜಿಸ್ಟ್ (ಮಹಿಳಾ), ಕ್ಷಾರಸೂತ್ರ ಅಟೆಂಡರ್, ಮಲ್ಟಿಪರ್ಪಸ್ ವರ್ಕರ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಯಾದಗಿರಿ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 13 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಕರೆಯಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ತಜ್ಞ ವೈದ್ಯರು ಯುನಾನಿ | 3 | 52,550+5000 |
ತಜ್ಞ ವೈದ್ಯರು ಆಯುರ್ವೇದ | 2 | 52,550+5000 |
ಔಷಧ ವಿತರಕರು | 2 | 27,550 |
ಮಸಾಜಿಸ್ಟ್ (ಮಹಿಳಾ) | 3 | 18,500 |
ಕ್ಷಾರಸೂತ್ರ ಅಟೆಂಡರ್ | 1 | 18,500 |
ಮಲ್ಟಿಪರ್ಪಸ್ ವರ್ಕರ್ | 2 | 16,900 |
ಶೈಕ್ಷಣಿಕ ಅರ್ಹತೆ :
ತಜ್ಞ ವೈದ್ಯರು ಯುನಾನಿ – ಆಯುರ್ವೇದ ವೈದ್ಯಕೀಯ/ ಯುನಾನಿ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪದವಿ ಜೊತೆಗೆ ವೈದ್ಯ ವೃತ್ತಿ ನೋಂದಣಿ ಮಾಡಿಕೊಂಡಿರಬೇಕು.
ತಜ್ಞ ವೈದ್ಯರು ಆಯುರ್ವೇದ – ಆಯುರ್ವೇದ ವೈದ್ಯಕೀಯ/ ಯುನಾನಿ ವೈದ್ಯಕೀಯ ಪದವಿ ಮತ್ತು ಪಂಚಕರ್ಮ/ಶಲ್ಯತಂತ್ರ/ ಕಾಯಚಿಕಿತ್ಸಾ ಸ್ನಾತಕೋತ್ತರ ಪದವಿ ಜೊತೆಗೆ ವೈದ್ಯ ವೃತ್ತಿ ನೋಂದಣಿ ಮಾಡಿಕೊಂಡಿರಬೇಕು.
ಔಷಧ ವಿತರಕರು – ಎಸ್.ಎಸ್.ಎಲ್.ಸಿ ಮತ್ತು ಡಿಪ್ಲೊಮಾ ಇನ್ ಫಾರ್ಮಸಿ ಜೊತೆಗೆ ನೋಂದಣಿ ಮಾಡಿಕೊಂಡಿರಬೇಕು.
ಉದ್ಯೋಗ ಮಾಹಿತಿ : ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಬೆರಳಚ್ಚುಗಾರ, ಜವಾನ ಹುದ್ದೆಗಳ ನೇಮಕಾತಿ 2023
ಮಸಾಜಿಸ್ಟ್ – ಕನಿಷ್ಠ 7ನೇ ತರಗತಿ, ಆಯುಷ್ ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರಬೇಕು.
ಕ್ಷಾರಸೂತ್ರ ಅಟೆಂಡರ್ – ಕನಿಷ್ಠ 10ನೇ ತರಗತಿ ಹಾಗೂ ಆಯುಷ್ ಆಸ್ಪತ್ರೆ/ ಚಿಕಿತ್ಸಾಲಯಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಅನುಭವ ಹೊಂದಿರಬೇಕು.
ಮಲ್ಟಿಪರ್ಪಸ್ ವರ್ಕರ್ – ಕನಿಷ್ಠ 10ನೇ ತರಗತಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
ವಯಸ್ಸಿನ ಮೀತಿ : ದಿನಾಂಕ 31/10/2023ಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಎಸ್ಸಿ, ಎಸ್ಟಿ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಆಯ್ಕೆ ವಿಧಾನ : ಮಸಾಜಿಸ್ಟ್ ಮತ್ತು ಕ್ಷಾರಸೂತ್ರ ಅಟೆಂಡೆಂಟ್ ಹುದ್ದೆಗಳಿಗೆ ಪ್ರಾಯೋಗಿಕವಾಗಿ (ಪ್ರಾಕ್ಟಿಕಲ್) ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ತಜ್ಞ ವೈದ್ಯರು ಮತ್ತು ಇತರೆ ಹುದ್ದೆಗಳಿಗೆ ನಿಗದಿಪಡಿಸಲಾದ ಶೈಕ್ಷಣಿಕ ಅರ್ಹತೆಯಲ್ಲಿ ಪಡೆದ ಅಂಕಗಳು, ಸಂದರ್ಶನ ಮತ್ತು ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಜಿಲ್ಲಾ ಪಂಚಾಯತ್ ನೇಮಕಾತಿ 2023
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 04, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 24, 2023
Ayush Department Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.