
Ayush Department Karnataka Recruitment 2026 : ಕರ್ನಾಟಕ ರಾಜ್ಯ ಆಯುಷ್ ಸೊಸೈಟಿಯು ರಾಷ್ಟ್ರೀಯ ಆಯುಷ್ ಅಭಿಯಾನದ ಆಯುಷ್ಮಾನ್ ಭಾರತ್ ಯೋಜನೆಯಡಿ ಖಾಲಿ ಇರುವ ಲೆಕ್ಕ ಪತ್ರ ಸಹಾಯಕರು (ಅಕೌಂಟ್ ಅಸಿಸ್ಟಂಟ್) ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಸಂದರ್ಶನ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Ayush Department Karnataka Recruitment 2026 : Details of Vacancies
ಹುದ್ದೆ :
ಲೆಕ್ಕ ಪತ್ರ ಸಹಾಯಕರು (ಅಕೌಂಟ್ ಅಸಿಸ್ಟಂಟ್)
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಬಿ.ಕಾಂ/ ಬಿಬಿಎ/ ಬಿಬಿಎಂ ಪದವಿ ವಿದ್ಯಾರ್ಹತೆ ಹೊಂದಿರಬೇಕು. ಟ್ಯಾಲಿ ಪ್ರೈಮ್ ಹಾಗೂ ಎಂಎಸ್ ಆಫೀಸ್ ಬಳಕೆಯ ಬಗ್ಗೆ ಜ್ಞಾನವನ್ನು ಹೊಂದಿರಬೇಕು.
ಉದ್ಯೋಗ ಮಾಹಿತಿ : ಜಿಲ್ಲಾ ನಗರಾಭಿವೃದ್ಧಿ ಕೋಶದಿಂದ ಹುದ್ದೆಗಳ ನೇಮಕಾತಿ 2026
ವಯೋಮಾನ :
ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,000 ವೇತನ ನೀಡಲಾಗುತ್ತದೆ.
ಅನುಭವ :
ಹುದ್ದೆಗೆ ಸಂಬಂಧಪಟ್ಟ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಅನುಭವ ಹೊಂದಿರಬೇಕು.
ಆಯ್ಕೆ ವಿಧಾನ :
ಲಿಖಿತ ಪರೀಕ್ಷೆ, ಅನುಭವ ಮತ್ತು ಸಂದರ್ಶನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಉದ್ಯೋಗ ಮಾಹಿತಿ : ಸೌತ್ ಸೆಂಟ್ರಲ್ ರೈಲ್ವೆ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯೊಂದಿಗೆ ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಹಾಜರಾಗಬೇಕು.
ಸಂದರ್ಶನಕ್ಕೆ ಹಾಜರಾಗಬೇಕಾದ ವಿಳಾಸ :
ಸಭಾಂಗಣ, 1ನೇ ಮಹಡಿ, ಆಯುಷ್ ನಿರ್ದೇಶನಾಲಯ, ಧನ್ವಂತರಿ ರಸ್ತೆ, ಬೆಂಗಳೂರು – 560009
ಸಂದರ್ಶನ ನಡೆಯುವ ದಿನಾಂಕದ ವಿವರ :
ಸಂದರ್ಶನ ದಿನಾಂಕ : ಮಾರ್ಚ್ 25, 2026 ಬೆಳಿಗ್ಗೆ 11.00 ಗಂಟೆಗೆ
Ayush Department Karnataka Recruitment 2026 : Important Links
| NOTIFICATION & APPLICATION FORM | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.