Ayush Department Recruitment 2021 – ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಯ ಭರ್ತಿ

Ayush Department Recruitment 2021 | ಜಿಲ್ಲಾ ಆಯುಷ್ ಇಲಾಖೆಯಲ್ಲಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Ayush Department Recruitment 2021 : Details of Vacancies

ಹುದ್ದೆ : ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಜಿಲ್ಲಾ ಆಯುಷ್ ಅಧಿಕಾರಿಗಳ ಕಾರ್ಯಾಲಯ, ಕಾರವಾರದಲ್ಲಿ ಕೆಲಸ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಅಗತ್ಯವಿರುವ ಒಂದು ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000 ಗೌರವ ಧನ ನೀಡಲಾಗುತ್ತದೆ.

ಶೈಕ್ಷಣಿಕ ಅರ್ಹತೆ : ಅಂಗೀಕೃತ ವಿಶ್ವವಿದ್ಯಾಲಯದ ಆಯುಷ್ ಪದವಿ, ಎಂಬಿಎ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಯಾವುದೇ ಪದವಿ ಮತ್ತು ಕಂಪ್ಯೂಟರ್ ಜ್ಞಾನ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ ಗರಿಷ್ಠ 36 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಅನುಭವ : ಕನಿಷ್ಠ 3 ವರ್ಷ ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಅನುಭವ ಹೊಂದಿರತಕ್ಕದ್ದು, ಆಯುಷ್ ಆರೋಗ್ಯ ಕ್ಷೇತ್ರದಲ್ಲಿ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

ಆಯ್ಕೆ ವಿಧಾನ : ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಒಂದು ವರ್ಷದ ಅವಧಿಗೆ ನೇಮಕ ಮಾಡಲಾಗುವುದು.

ಉದ್ಯೋಗ ಮಾಹಿತಿ : ಅಂಗನವಾಡಿ ಟೀಚರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಆಯುಷ್ ಇಲಾಖೆಯಲ್ಲಿ ಖಾಲಿಯಿರುವ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯ ಅರ್ಜಿಗಳನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ), ಅಗತ್ಯ ದಾಖಲಾತಿಗಳೊಂದಿಗೆ ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಜಿಲ್ಲಾ ಆಯುಷ್ ಅಧಿಕಾರಿಗಳು,
ಉತ್ತರ ಕನ್ನಡ ಜಿಲ್ಲೆ, ಕಾರವಾರ – 581301

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 06, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 21, 2021

Ayush Department Recruitment 2021 : Important Links

ಅಧಿಸೂಚನೆ : Click Here

ಹೆಚ್ಚಿನ ಮಾಹಿತಿಗಾಗಿ ಕಚೇರಿ ಅವಧಿಯಲ್ಲಿ 08382-220883ಗೆ ಸಂಪರ್ಕಿಸುವುದು.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.