Bagalkot DCC Bank Recruitment 2022 – Apply Online for 110 FDA, SDA and Various Posts

Bagalkot DCC Bank Recruitment 2022 : ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ, ಬಾಗಲಕೋಟೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bagalkot DCC Bank Recruitment 2022 : Details of Vacancies

ಹುದ್ದೆ : ಸಾಫ್ಟ್‌ವೇರ್ ಇಂಜಿನಿಯರ್, ಸಿವಿಲ್ ಇಂಜಿನಿಯರ್, ಗಣಕಯಂತ್ರ ಸಂಯೋಜಕರು, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ಸಿಪಾಯಿ, ವಾಹನ ಚಾಲಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬಾಗಲಕೋಟೆ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 110 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಸಾಫ್ಟ್‌ವೇರ್ ಇಂಜಿನಿಯರ್0140900-78200
ಸಿವಿಲ್ ಇಂಜಿನಿಯರ್0140900-78200
ಗಣಕಯಂತ್ರ ಸಂಯೋಜಕರು0237900-70850
ಪ್ರಥಮ ದರ್ಜೆ ಸಹಾಯಕರು2037900-70850
ದ್ವಿತೀಯ ದರ್ಜೆ ಸಹಾಯಕರು3033450-62600
ಸಿಪಾಯಿ5427650-52650
ವಾಹನ ಚಾಲಕರು0227650-52650

ಶೈಕ್ಷಣಿಕ ಅರ್ಹತೆ :
• ಸಾಫ್ಟ್‌ವೇರ್ ಇಂಜಿನಿಯರ್ ಹುದ್ದೆಗೆ ಅಂಗೀಕೃತ ಎ.ಐ.ಸಿ.ಟಿ.ಇ ನಿಂದ ಪಡೆದ ಪದವಿ ಬಿ.ಇ (ಗಣಕ ವಿಜ್ಞಾನ), ಬಿಸಿಎ ಪದವಿ ಪಡೆದಿರಬೇಕು. ಜೊತೆಗೆ ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.
• ಸಿವಿಲ್ ಇಂಜಿನಿಯರ್ ಹುದ್ದೆಗೆ ಅಂಗೀಕೃತ ಎ.ಐ.ಸಿ.ಟಿ.ಇ ನಿಂದ ಪಡೆದ ಪದವಿ ಬಿ.ಇ (ಸಿವಿಲ್) ಕನಿಷ್ಠ ಶೇ. 60% ಅಂಕಗಳೊಂದಿಗೆ ಪದವಿ ಪಡೆದಿರಬೇಕು. ಜೊತೆಗೆ ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.
• ಗಣಕಯಂತ್ರ ಸಂಯೋಜಕರು ಹುದ್ದೆಗೆ ಅಂಗೀಕೃತ ಎ.ಐ.ಸಿ.ಟಿ.ಇ ನಿಂದ ಪಡೆದ ಪದವಿ ಬಿ.ಇ/ಬಿ.ಟೆಕ್, ಕಂಪ್ಯೂಟರ್ ಸೈನ್ಸ್/ ಇಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್, ಬಿಸಿಎ, ಬಿ.ಎಸ್ಸಿ (ಕಂಪ್ಯೂಟರ್ ಸೈನ್ಸ್) ಪದವಿ ಪಡೆದಿರಬೇಕು. ಜೊತೆಗೆ ಹುದ್ದೆಗೆ ನಿಗದಿಪಡಿಸಿದ ಅನುಭವ ಹೊಂದಿರಬೇಕು.
• ಪ್ರಥಮ ದರ್ಜೆ ಸಹಾಯಕರು & ದ್ವಿತೀಯ ದರ್ಜೆ ಸಹಾಯಕರು ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಾಸಾಗಿರಬೇಕು. ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.
• ಸಿಪಾಯಿ ಹುದ್ದೆಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
• ವಾಹನ ಚಾಲಕರು ಹುದ್ದೆಗೆ ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು. ಜೊತೆಗೆ ವಾಹನ ಚಾಲನೆ ಪರವಾನಿಗೆಯೊಂದಿಗೆ 5 ವರ್ಷ ಅನುಭವ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ಆನ್‌ಲೈನ್‌ ಮೂಲಕ ಸಲ್ಲಿಸಲಾದ ಅರ್ಜಿಗಳನ್ನು ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆ ಹಾಗೂ ಅಗತ್ಯ ದಾಖಲೆಗಳ ಆಧಾರದ ಮೇಲೆ ಪರಿಶೀಲಿಸಿ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಗೆ ಕರೆಯಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆಯಲಾದ ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಮೌಖಿಕ ಸಂದರ್ಶನಕ್ಕೆ ಕರೆಯಲಾಗುವುದು.

ಉದ್ಯೋಗ ಮಾಹಿತಿ : ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ನೇಮಕಾತಿ 2022

ಬಾಗಲಕೋಟೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು : ಸ್ವ ಹಸ್ತಾಕ್ಷರವಿರುವ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ, ವಯಸ್ಸು ದೃಢೀಕರಣ ಕುರಿತು ಎಸ್.ಎಸ್.ಎಲ್.ಸಿ ಅಂಕಪಟ್ಟಿ/ ವರ್ಗಾವಣೆ ಪ್ರಮಾಣ ಪತ್ರ, ವಿದ್ಯಾರ್ಹತೆ ಕುರಿತು ಪ್ರಮಾಣ ಪತ್ರ ಮತ್ತು ಪದವಿಯ ಎಲ್ಲಾ ವರ್ಗಗಳ ಅಂಕಪಟ್ಟಿ, ವಿವಿಧ ಮೀಸಲಾತಿ ಕೋರಿದ್ದಲ್ಲಿ ಸರಕಾರ ನಿಗದಿಪಡಿಸಿದ ನಮೂನೆಯಲ್ಲಿರುವ ಪ್ರಮಾಣ ಪತ್ರ, ಸೇವಾ ಅನುಭವ ಪ್ರಮಾಣ ಪತ್ರ.

ನಿಗದಿತ ಅರ್ಜಿ ಶುಲ್ಕದ ವಿವರ : ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 1000 ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ಅಂಗವಿಕಲ/ಮಾಜಿ ಸೈನಿಕ/ವಿಧವಾ ಅಭ್ಯರ್ಥಿಗಳು ರೂ. 500 ಪಾವತಿಸಬೇಕು

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 11, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 04, 2022

Bagalkot DCC Bank Recruitment 2022 : Important Links

ಅಧಿಸೂಚನೆClick Here
ಅರ್ಜಿ ಸಲ್ಲಿಸಿClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment