Bagalkot District Court Recruitment 2022 – Apply Online for 54 Stenographer, Typist, Process Server, Peon Posts

Bagalkot District Court Recruitment 2022 : ಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bagalkot District Court Recruitment 2022 : Details of Vacancies

ಹುದ್ದೆ : ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹಾಗೂ ಸಿಪಾಯಿ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 54 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಶೀಘ್ರಲಿಪಿಗಾರರು ಗ್ರೇಡ್ 31327650-52650
ಬೆರಳಚ್ಚುಗಾರರು0221400-42000
ಬೆರಳಚ್ಚು ನಕಲುಗಾರರು0121400-42000
ಆದೇಶ ಜಾರಿಕಾರರು0119950-37900
ಸಿಪಾಯಿ3717000-28950

ಶೈಕ್ಷಣಿಕ ಅರ್ಹತೆ :
• ಶೀಘ್ರಲಿಪಿಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯ ಕಮರ್ಷಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು & ಶೀಘ್ರಲಿಪಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಕಮರ್ಷಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.


• ಬೆರಳಚ್ಚುಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತಾಂತ್ರಿಕ ಶಿಕ್ಷಣ ಪರೀಕ್ಷಾ ಮಂಡಳಿಯ ಕಮರ್ಷಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆಸಲಾದ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ಕಮರ್ಷಿಯಲ್ ಪ್ರ್ಯಾಕ್ಟಿಸ್ 3 ವರ್ಷಗಳ ಡಿಪ್ಲೋಮಾ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.


• ಬೆರಳಚ್ಚು ನಕಲುಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾದ ಕಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.


• ಆದೇಶ ಜಾರಿಕಾರರು ಹುದ್ದೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.


• ಸಿಪಾಯಿ ಹುದ್ದೆಗೆ 10ನೇ ತರಗತಿಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಆಯ್ಕೆ ವಿಧಾನ :
• ಶೀಘ್ರಲಿಪಿಗಾರ ಹುದ್ದೆಗೆ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ, ಹಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು, ಶೀಘ್ರಲಿಪಿ ಪರೀಕ್ಷೆಯಲ್ಲಿ ಮತ್ತು ಆಯ್ಕೆ ಪ್ರಾಧಿಕಾರ ನಡೆಸುವ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
• ಬೆರಳಚ್ಚುಗಾರ ಹುದ್ದೆಗೆ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ, ಹಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಮತ್ತು ಆಯ್ಕೆ ಪ್ರಾಧಿಕಾರ ನಡೆಸುವ ಬೆರಳಚ್ಚು ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
• ಬೆರಳಚ್ಚು ನಕಲುಗಾರರು ಹುದ್ದೆಗೆ ಅಭ್ಯರ್ಥಿಯು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ, ಕಿರಿಯ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿ ಮತ್ತು ಆಯ್ಕೆ ಪ್ರಾಧಿಕಾರ ನಡೆಸುವ ಬೆರಳಚ್ಚು ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಸರಾಸರಿ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
• ಆದೇಶ ಜಾರಿಕಾರ, ಸೇವಕ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022

ಬಾಗಲಕೋಟೆ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬಾಗಲಕೋಟೆ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 150
• ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 21, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 21, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 22, 2022

Bagalkot District Court Recruitment 2022 : Important Links

ಅಧಿಸೂಚನೆClick Here
ಅರ್ಜಿ ಸಲ್ಲಿಸಿClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment