ಬಾಗಲಕೋಟೆ ಜಿಲ್ಲಾ ಪಂಚಾಯತ್ ನೇಮಕಾತಿ 2023 – Bagalkot Zilla Panchayat Recruitment 2023 Apply Online at Bagalkot.nic.in

Bagalkot Zilla Panchayat Recruitment 2023 : ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬಾಗಲಕೋಟೆ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bagalkot Zilla Panchayat Recruitment 2023 : Details of Vacancies

ಹುದ್ದೆ : ತಾಂತ್ರಿಕ ಸಹಾಯಕರು (ರೇಷ್ಮೆ), ತಾಂತ್ರಿಕ ಸಹಾಯಕರು (ತೋಟಗಾರಿಕೆ), ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ಸಿವಿಲ್), ತಾಲೂಕಾ ಎಂಐಎಸ್ ಸಂಯೋಜಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬಾಗಲಕೋಟೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 14 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ತಾಂತ್ರಿಕ ಸಹಾಯಕರು (ರೇಷ್ಮೆ)1
ತಾಂತ್ರಿಕ ಸಹಾಯಕರು (ತೋಟಗಾರಿಕೆ)7
ತಾಂತ್ರಿಕ ಸಹಾಯಕರು (ಅರಣ್ಯ)4
ತಾಂತ್ರಿಕ ಸಹಾಯಕರು (ಸಿವಿಲ್)1
ತಾಲೂಕಾ ಎಂಐಎಸ್ ಸಂಯೋಜಕರು1

ಶೈಕ್ಷಣಿಕ ಅರ್ಹತೆ :
• ತಾಂತ್ರಿಕ ಸಹಾಯಕರು (ರೇಷ್ಮೆ) – ಬಿ.ಎಸ್ಸಿ/ಎಂ.ಎಸ್ಸಿ ಸೆರಿಕಲ್ಚರ್
• ತಾಂತ್ರಿಕ ಸಹಾಯಕರು (ತೋಟಗಾರಿಕೆ) – ಬಿ.ಎಸ್ಸಿ/ಎಂ.ಎಸ್ಸಿ ಹೊರ್ಟಿಕಲ್ಚರ್
• ತಾಂತ್ರಿಕ ಸಹಾಯಕರು (ಅರಣ್ಯ) – ಬಿ.ಎಸ್ಸಿ/ಎಂ.ಎಸ್ಸಿ ಫಾರೆಸ್ಟ್ರಿ
• ತಾಂತ್ರಿಕ ಸಹಾಯಕರು (ಸಿವಿಲ್) – ಬಿಇ/ ಎಂ.ಟೆಕ್ ಸಿವಿಲ್
• ತಾಲೂಕಾ ಎಂಐಎಸ್ ಸಂಯೋಜಕರು – ಬಿಸಿಎ/ಎಂಸಿಎ/ಬಿಇ ಕಂಪ್ಯೂಟರ್ ಸೈನ್ಸ್, ಕಂಪ್ಯೂಟರ್ ಸೈನ್ಸ್ ಪದವಿ

ವಯೋಮಾನ : ದಿನಾಂಕ 19/10/2023ಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : ಬಾಗಲಕೋಟೆ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಆಯ್ಕೆ ವಿಧಾನ : ವಿದ್ಯಾರ್ಹತೆ ಹಾಗೂ ಅನುಭವದ ಆಧಾರದ ಮೇಲೆ ಮೆರಿಟ್ ಲಿಸ್ಟ್ ಸಿದ್ದಪಡಿಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಅನುಭವ : ಅಭ್ಯರ್ಥಿಗಳು ಹುದ್ದೆಗೆ ಸಂಬಂಧಿಸಿದ ಕಾರ್ಯಕ್ಷೇತ್ರದಲ್ಲಿ ಕನಿಷ್ಠ 3 ವರ್ಷಗಳ ಅನುಭವ ಹೊಂದಿರಬೇಕು. ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು ಈ ಬಗ್ಗೆ ಪ್ರಾಯೋಗಿಕ ಪರೀಕ್ಷೆ ಮೂಲಕ ಅಂತಿಮ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 26, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಅಕ್ಟೋಬರ್ 19, 2023

Bagalkot Zilla Panchayat Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment