Ballari DCC Bank Recruitment 2022 – Apply Online for 58 FDA, SDA and Various Posts

Ballari DCC Bank Recruitment 2022 : ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಹೊಸಪೇಟೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Ballari DCC Bank Recruitment 2022 : Details of Vacancies

ಹುದ್ದೆ : ಕಂಪ್ಯೂಟರ್ ಇಂಜಿನಿಯರ್, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ವಾಹನ ಚಾಲಕರು ಹಾಗೂ ಕಿರಿಯ ಸೇವಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬಳ್ಳಾರಿ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 58 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಕಂಪ್ಯೂಟರ್ ಇಂಜಿನಿಯರ್0133450-62600
ಪ್ರಥಮ ದರ್ಜೆ ಸಹಾಯಕರು0127650-52650
ದ್ವಿತೀಯ ದರ್ಜೆ ಸಹಾಯಕರು4021400-42000
ವಾಹನ ಚಾಲಕರು0119950-37900
ಕಿರಿಯ ಸೇವಕರು1518600-32600

ಶೈಕ್ಷಣಿಕ ಅರ್ಹತೆ :
• ಕಂಪ್ಯೂಟರ್ ಇಂಜಿನಿಯರ್ ಹುದ್ದೆಗೆ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಬಿ.ಇ. ಇನ್ ಕಂಪ್ಯೂಟರ್ ಸೈನ್ಸ್ ಅಥವಾ ಎಂ.ಸಿ.ಎ ಪರೀಕ್ಷೆಯಲ್ಲಿ ಕನಿಷ್ಠ ಶೇ. 60% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಎಸ್ಸಿ, ಎಸ್ಟಿ, ಪ್ರ-1 ರ ಅಭ್ಯರ್ಥಿಗಳಾಗಿದ್ದಲ್ಲಿ ಶೇಕಡ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.


• ಪ್ರಥಮ ದರ್ಜೆ ಸಹಾಯಕರು ಹುದ್ದೆಗೆ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಯಾವುದೇ ಪದವಿಯಲ್ಲಿ ಕನಿಷ್ಠ ಶೇ. 60% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಎಸ್ಸಿ, ಎಸ್ಟಿ, ಪ್ರ-1 ರ ಅಭ್ಯರ್ಥಿಗಳಾಗಿದ್ದಲ್ಲಿ ಶೇಕಡ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.


• ದ್ವಿತೀಯ ದರ್ಜೆ ಸಹಾಯಕರು ಹುದ್ದೆಗೆ ದ್ವಿತೀಯ ಪಿಯುಸಿ ಯಲ್ಲಿ ಕನಿಷ್ಠ ಶೇ. 60% ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಎಸ್ಸಿ, ಎಸ್ಟಿ, ಪ್ರ-1 ರ ಅಭ್ಯರ್ಥಿಗಳಾಗಿದ್ದಲ್ಲಿ ಶೇಕಡ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ಆಪರೇಷನ್ಸ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.


• ವಾಹನ ಚಾಲಕರು ಹಾಗೂ ಕಿರಿಯ ಸೇವಕರು ಹುದ್ದೆಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿದ್ದು, ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು. ಜೊತೆಗೆ ವಾಹನ ಚಾಲಕರು ಹುದ್ದೆಗೆ ಕಾನೂನುಬದ್ಧ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ನಿಗದಿಪಡಿಸಲಾಗಿದೆ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಹಿಂದುಳಿದ ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ಕಂಪ್ಯೂಟರ್ ಇಂಜಿನಿಯರ್, ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು ಹುದ್ದೆಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ವಾಹನ ಚಾಲಕರು ಹಾಗೂ ಕಿರಿಯ ಸೇವಕರು ಹುದ್ದೆಗೆ ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಅಪೆಕ್ಸ್ ಬ್ಯಾಂಕ್ ನೇಮಕಾತಿ 2022

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬ್ಯಾಂಕಿನ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ : ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 1000 ಜೊತೆಗೆ ಅಂಚೆ ಶುಲ್ಕ ರೂ. 40 ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ1/ಅಂಗವಿಕಲ/ಮಾಜಿ ಸೈನಿಕ ಅಭ್ಯರ್ಥಿಗಳು ರೂ. 500 ಜೊತೆಗೆ ಅಂಚೆ ಶುಲ್ಕ ರೂ. 40 ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ : ಕರ್ನಾಟಕ ರಾಜ್ಯದಲ್ಲಿನ ಯಾವುದೇ ವಿದ್ಯುನ್ಮಾನ ಪಾವತಿ ಅಂಚೆ ಕಚೇರಿಯಲ್ಲಿ ಶುಲ್ಕ ಪಾವತಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 25, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 16, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಏಪ್ರಿಲ್ 18, 2022

Ballari DCC Bank Recruitment 2022 : Important Links

ಅಧಿಸೂಚನೆClick Here
ಅರ್ಜಿ ಸಲ್ಲಿಸಿClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment