ಬಳ್ಳಾರಿ ಡಿಸಿಸಿ ಬ್ಯಾಂಕ್ ನೇಮಕಾತಿ 2026 – Ballari DCC Bank Recruitment 2026

ಬಳ್ಳಾರಿ ಡಿಸಿಸಿ ಬ್ಯಾಂಕ್ ನೇಮಕಾತಿ 2026 - Ballari DCC Bank Recruitment 2026

Ballari DCC Bank Recruitment 2026 : ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಹೊಸಪೇಟೆ ಇದರಲ್ಲಿ ಖಾಲಿಯಿರುವ ವ್ಯವಸ್ಥಾಪಕರು/ ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ವಾಹನ ಚಾಲಕರು ಹಾಗೂ ಕಿರಿಯ ಸೇವಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Ballari DCC Bank Recruitment 2026 : Details of Vacancies

ಹುದ್ದೆ :

ವ್ಯವಸ್ಥಾಪಕರು/ ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರು, ವಾಹನ ಚಾಲಕರು, ಕಿರಿಯ ಸೇವಕರು.

ಕರ್ತವ್ಯ ಸ್ಥಳ :

ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬಳ್ಳಾರಿ ಜಿಲ್ಲೆ, ಕರ್ನಾಟಕದಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 82 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ವ್ಯವಸ್ಥಾಪಕರು/ ಪ್ರಥಮ ದರ್ಜೆ ಸಹಾಯಕರು22
ದ್ವಿತೀಯ ದರ್ಜೆ ಸಹಾಯಕರು28
ವಾಹನ ಚಾಲಕರು1
ಕಿರಿಯ ಸೇವಕರು31

ಶೈಕ್ಷಣಿಕ ಅರ್ಹತೆ :

ವ್ಯವಸ್ಥಾಪಕರು/ ಪ್ರಥಮ ದರ್ಜೆ ಸಹಾಯಕರು –

ಯಾವುದೇ ಪದವಿಯಲ್ಲಿ ತೇರ್ಗಡೆಯಾಗಿರಬೇಕು. ಕಂಪ್ಯೂಟರ್ ನಿರ್ವಹಣೆ ಬಗ್ಗೆ ಜ್ಞಾನ ಹೊಂದಿರಬೇಕು.

ದ್ವಿತೀಯ ದರ್ಜೆ ಸಹಾಯಕರು –

ದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ನಿರ್ವಹಣೆ ಬಗ್ಗೆ ಜ್ಞಾನ ಹೊಂದಿರಬೇಕು.

ವಾಹನ ಚಾಲಕರು –

ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು. ಕಾನೂನುಬದ್ಧ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.

ಕಿರಿಯ ಸೇವಕರು –

ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಕೆಎಂಎಫ್ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನೇಮಕಾತಿ 2026

ವಯೋಮಾನ :

ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಇತರೆ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

ವೇತನ :

ಹುದ್ದೆವೇತನ
ವ್ಯವಸ್ಥಾಪಕರು/ ಪ್ರಥಮ ದರ್ಜೆ ಸಹಾಯಕರುರೂ. 44,425 – ರೂ. 83,700
ದ್ವಿತೀಯ ದರ್ಜೆ ಸಹಾಯಕರುರೂ. 34,100 – ರೂ. 67,600
ವಾಹನ ಚಾಲಕರುರೂ. 31,775 – ರೂ. 61,300
ಕಿರಿಯ ಸೇವಕರುರೂ. 29,600 – ರೂ. 52,800

ಆಯ್ಕೆ ವಿಧಾನ :

ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಉದ್ಯೋಗ ಮಾಹಿತಿ : ರಾಯಚೂರು ಜಿಲ್ಲೆಯ ಗ್ರಾಮ ಪಂಚಾಯಿತಿಯಲ್ಲಿ ನೇಮಕಾತಿ 2026

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :

• ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 1,000/-
• ಪ. ಜಾತಿ, ಪ. ಪಂಗಡದ, ಪ್ರ1, ವಿಕಲಚೇತನ, ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 500/-

ಶುಲ್ಕ ಪಾವತಿಸುವ ವಿಧಾನ :

ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮತ್ತು ಯುಪಿಐ ಮೂಲಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :

• ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 06, 2026 ಜೂನ್ 01, 2026
• ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 06, 2026 ಜೂನ್ 30, 2026

Ballary DCC Bank Recruitment 2026 : Important Links

REVISED NOTIFICATION CLICK HERE
OLD NOTIFICATION CLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ವಿಶೇಷ ಸೂಚನೆ : ಈ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಸಿ ಶುಲ್ಕ ಪಾವತಿಸಿದ ಅಭ್ಯರ್ಥಿಗಳು ಈ ಹಿಂದೆ ಶುಲ್ಕದೊಂದಿಗೆ ಸಲ್ಲಿಸಿರುವ ಅರ್ಜಿ ನೋಂದಣಿ ಸಂಖ್ಯೆ ವಿವರವನ್ನು ಸ್ಪಷ್ಟವಾಗಿ ನಮೂದಿಸಿ ಮತ್ತೊಮ್ಮೆ ಮರು ಅರ್ಜಿ ಸಲ್ಲಿಸತಕ್ಕದ್ದು. ಈಗಾಗಲೇ ಅರ್ಜಿ ಶುಲ್ಕ ಪಾವತಿಸಿರುವ ಅಭ್ಯರ್ಥಿಗಳು ಪ್ರತ್ಯೇಕವಾಗಿ ಪುನಃ ಅರ್ಜಿ ಶುಲ್ಕ ಪಾವತಿಸುವ ಅಗತ್ಯತೆ ಇರುವುದಿಲ್ಲ.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment