Ballari District Court Recruitment 2022 – Apply Online for 01 Driver Posts

Ballari District Court Recruitment 2022 : ಬಳ್ಳಾರಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಚಾಲಕ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Ballari District Court Recruitment 2022 : Details of Vacancies

ಹುದ್ದೆ : ಚಾಲಕರು (ಡ್ರೈವರ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬಳ್ಳಾರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಹೈದರಾಬಾದ್-ಕರ್ನಾಟಕ ಸ್ಥಳೀಯ ವೃಂದದ 01 ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :
• ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.
• ಭಾರೀ ವಾಹನ ಚಾಲನೆಯ ಪರವಾನಿಗೆಯನ್ನು ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕದೊಳಗೆ ಹೊಂದಿರಬೇಕು.

ವಯೋಮಾನ : ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ, ಎಸ್ಸಿ, ಎಸ್ಟಿ, ಪ್ರವರ್ಗ 1ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇರ ನೇಮಕಾತಿ 2022

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ಅರ್ಹತಾ ಪರೀಕ್ಷೆ ಹಾಗೂ ಚಾಲನ ಕೌಶಲ್ಯ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 25 ಅಭ್ಯರ್ಥಿಗಳಂತೆ (1:25ರ ಅನುಪಾತದಲ್ಲಿ) ಅತೀ ಹೆಚ್ಚು ಅಂಕ ಪಡೆದ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. (ಚಾಲನ ಕೌಶಲ್ಯ ಪರೀಕ್ಷೆಯು 50 ಅಂಕ, ಸಂದರ್ಶನವು 10 ಅಂಕಗಳನ್ನು ಒಳಗೊಂಡಿರುತ್ತದೆ)

ಬಳ್ಳಾರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ಡ್ರೈವರ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬಳ್ಳಾರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ : ಸಾಮಾನ್ಯ ವರ್ಗ, ಪ್ರವರ್ಗ 2ಎ,2ಬಿ,3ಎ,3ಬಿ ಅಭ್ಯರ್ಥಿಗಳು ರೂ. 200 ಶುಲ್ಕ ಪಾವತಿಸಬೇಕು. ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಬಳ್ಳಾರಿ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 05, 2022
ಅರ್ಜಿ ಸಲ್ಲಿಸಲು, ಆನ್‌ಲೈನ್‌ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 30, 2022
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಅಕ್ಟೋಬರ್ 01, 2022

Ballari District Court Recruitment 2022 : Important Links

Notification Click Here
Apply Online Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment