Ballari District Gram Panchayat Library Supervisor Recruitment 2022 : ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಕೇಂದ್ರ ಗ್ರಂಥಾಲಯದ ವ್ಯಾಪ್ತಿಯಲ್ಲಿ ಬರುವ ವಿವಿಧ ತಾಲೂಕಿನ ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿ ಗ್ರಂಥಾಲಯದಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Ballari District Gram Panchayat Library Supervisor Recruitment 2022 : Details of Vacancies
ಹುದ್ದೆ : ಗ್ರಂಥಾಲಯ ಮೇಲ್ವಿಚಾರಕರು
ಕರ್ತವ್ಯ ಸ್ಥಳ : ಬಳ್ಳಾರಿ ತಾಲೂಕಿನ ಸಿರಿವಾರ, ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯತಿ, ಹರಪನಹಳ್ಳಿ ತಾಲೂಕಿನ ಅರಸಿಕೆರೆ, ಹಗರಿಬೊಮ್ಮನಹಳ್ಳಿ ತಾಲೂಕಿನ ಬನ್ನಿಕಲ್ಲು, ಹಡಗಲಿ ತಾಲೂಕಿನ ಕಾಲ್ವಿ(ಪಶ್ಚಿಮ) ಹಾಗೂ ಕೂಡ್ಲಿಗಿ ತಾಲೂಕಿನ ಬಡೇಲಡಕು ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು 18 ವರ್ಷ ವಯಸ್ಸನ್ನು ಪೂರೈಸಿರಬೇಕು ಹಾಗೂ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 33 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 36 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಆಯ್ಕೆ ವಿಧಾನ : ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022
ಗ್ರಾಮ ಪಂಚಾಯ್ತಿ ಮತ್ತು ಪಟ್ಟಣ ಪಂಚಾಯ್ತಿ ಗ್ರಂಥಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಹುದ್ದೆ ಖಾಲಿಯಿರುವ ಗ್ರಾಮ ಪಂಚಾಯಿತಿ ಕಛೇರಿಗೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ (ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಸಲ್ಲಿಸಬೇಕು.
ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು : ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಟಿ.ಸಿ, ಮೀಸಲಾತಿ ಪ್ರಮಾಣ ಪತ್ರ, ಸ್ಥಳೀಯ ವಾಸಸ್ಥಳ ದೃಢೀಕರಣ ಪತ್ರ, ಅಂಗವಿಕಲತೆ (ಇದ್ದಲ್ಲಿ) ದೃಢೀಕರಣ ಪತ್ರ.
ಅರ್ಜಿ ಸಲ್ಲಿಸುವ ವಿಳಾಸ : ಹುದ್ದೆ ಖಾಲಿಯಿರುವ ಆಯಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳಿಗೆ ಅಥವಾ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿಗಳಿಗೆ ಅರ್ಜಿಗಳನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಇತರೆ ಮಾಹಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರಬೇಕು. ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದವರಿಗೆ ಆದ್ಯತೆ ನೀಡಲಾಗುವುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 13, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 15, 2022
Ballari District Gram Panchayat Library Supervisor Recruitment 2022 : Important Links
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿ ಕಾರ್ಯಾಲಯ ಅಥವಾ ಜಿಲ್ಲಾ ಕೇಂದ್ರ ಗ್ರಂಥಾಲಯ, ಬಳ್ಳಾರಿ ಇವರನ್ನು ಸಂಪರ್ಕಿಸಬಹುದು.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.