Ballari Zilla Panchayat Recruitment 2022 : ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದ ಮೇರೆಗೆ ನೇಮಕಾತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Ballari Zilla Panchayat Recruitment 2022 : Details of Vacancies
ಹುದ್ದೆ :
1) ತಾಲೂಕಾ ಸಂಯೋಜಕರು – 01 ಹುದ್ದೆ
ಎಂಸಿಎ/ ಬಿಸಿಎ ಅಥವಾ ಕಂಪ್ಯೂಟರ್ ಸೈನ್ಸ್‌ನಲ್ಲಿ ಪದವಿ ಅಥವಾ ಬಿಇ/ ಬಿಟೆಕ್ (ಕಂಪ್ಯೂಟರ್ ಸೈನ್ಸ್) ಅಥವಾ ಬಿಇ/ ಬಿಟೆಕ್ (ಇಲೆಕ್ಟ್ರಾನಿಕ್ಸ್) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
2) ತಾಂತ್ರಿಕ ಸಹಾಯಕರು (ಸಿವಿಲ್) – 04 ಹುದ್ದೆ
ಬಿಇ/ಬಿ.ಟೆಕ್ (ಸಿವಿಲ್) ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
3) ತಾಂತ್ರಿಕ ಸಹಾಯಕರು (ತೋಟಗಾರಿಕೆ) – 06 ಹುದ್ದೆ
ಬಿ.ಎಸ್ಸಿ (ತೋಟಗಾರಿಕೆ) ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
4) ತಾಂತ್ರಿಕ ಸಹಾಯಕರು (ಅರಣ್ಯ) – 02 ಹುದ್ದೆ
ಬಿ.ಎಸ್ಸಿ (ಅರಣ್ಯ) ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
5) ತಾಂತ್ರಿಕ ಸಹಾಯಕರು (ಕೃಷಿ) – 02 ಹುದ್ದೆ
ಬಿ.ಎಸ್ಸಿ (ಕೃಷಿ) ಶೈಕ್ಷಣಿಕ ಅರ್ಹತೆ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
6) ಆಡಳಿತಾತ್ಮಕ ಸಹಾಯಕರು – 05 ಹುದ್ದೆ
ಬಿ.ಕಾಂ ಪದವಿ ಹೊಂದಿರಬೇಕು. ಕನಿಷ್ಠ 6 ತಿಂಗಳು ಕಂಪ್ಯೂಟರ್ ಜ್ಞಾನ ಹೊಂದಿರುವ ಬಗ್ಗೆ ಪ್ರಮಾಣ ಪತ್ರ. ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಹಾಗೂ MS Officeನಲ್ಲಿ ಉತ್ತಮ ಕಾರ್ಯನಿರ್ವಹಣೆಯ ಅನುಭವ ಹೊಂದಿರಬೇಕು.
7) ಗಣಕಯಂತ್ರ ನಿರ್ವಾಹಕರು – 02 ಹುದ್ದೆ
ಯಾವುದೇ ಪದವಿ ಹೊಂದಿರಬೇಕು. ಕನಿಷ್ಠ 6 ತಿಂಗಳು ಕಂಪ್ಯೂಟರ್ ಜ್ಞಾನ ಹೊಂದಿರುವ ಬಗ್ಗೆ ಪ್ರಮಾಣ ಪತ್ರ. ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಹಾಗೂ MS Officeನಲ್ಲಿ ಉತ್ತಮ ಕಾರ್ಯನಿರ್ವಹಣೆಯ ಅನುಭವ ಹೊಂದಿರಬೇಕು.
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬಳ್ಳಾರಿ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 22 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವೇತನ : ತಾಲೂಕು ಸಂಯೋಜಕರು, ತಾಂತ್ರಿಕ ಸಹಾಯಕ (ಸಿವಿಲ್), ತಾಂತ್ರಿಕ ಸಹಾಯಕ (ಕೃಷಿ, ಅರಣ್ಯ, ತೋಟಗಾರಿಕೆ) ಹುದ್ದೆಗೆ ಮಾಸಿಕ ಸಂಭಾವನೆ 24,000 ಮತ್ತು ಪ್ರಯಾಣ ಭತ್ಯೆ 2,000 ಹಾಗೂ ಆಡಳಿತಾತ್ಮಕ ಸಹಾಯಕ & ಗಣಕಯಂತ್ರ ನಿರ್ವಾಹಕರು ಹುದ್ದೆಗೆ ಮಾಸಿಕ ಸಂಭಾವನೆ 15,008 ನೀಡಲಾಗುವುದು.
ಆಯ್ಕೆ ವಿಧಾನ : ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆ ಹಾಗೂ ಅನುಭವದ ಆಧಾರದ ಮೇಲೆ ಮೆರಿಟ್ ಪಟ್ಟಿ ತಯಾರಿಸಿ ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳಿಗೆ ಯಾವುದೇ ಸಂದರ್ಶನ ಇರುವುದಿಲ್ಲ.
ಉದ್ಯೋಗ ಮಾಹಿತಿ : ಬೆಳಗಾವಿ ಜಿಲ್ಲಾ ಪಂಚಾಯಿತಿಯಲ್ಲಿ ನೇರ ನೇಮಕಾತಿ 2022
ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಬಳ್ಳಾರಿ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಆಗಸ್ಟ್ 23, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 11, 2022
Ballari Zilla Panchayat Recruitment 2022 : Important Links
Notification | Click Here |
Apply Online | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.