Bangalore DCC Bank Recruitment 2023 – Apply Online for 96 Branch Manager, Junior Assistant, Computer Operator, Driver and Various Posts

Bangalore DCC Bank Recruitment 2023 – BDCC Bank Bangalore Recruitment 2023 : ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತ, ಬೆಂಗಳೂರು ಇದರಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bangalore DCC Bank Recruitment 2023 : Details of Vacancies

ಹುದ್ದೆ : ಶಾಖಾ ವ್ಯವಸ್ಥಾಪಕರು, ಹಿರಿಯ ಸಹಾಯಕರು, ಶೀಘ್ರಲಿಪಿಗಾರರು, ಕಿರಿಯ ಸಹಾಯಕರು, ಕಂಪ್ಯೂಟರ್ ಆಪರೇಟರ್, ವಾಹನ ಚಾಲಕರು, ನಾಲ್ಕನೇ ದರ್ಜೆ ನೌಕರರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 96 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಶಾಖಾ ವ್ಯವಸ್ಥಾಪಕರು440900-78200
ಹಿರಿಯ ಸಹಾಯಕರು1937900-70850
ಶೀಘ್ರಲಿಪಿಗಾರರು137900-70850
ಕಿರಿಯ ಸಹಾಯಕರು4330350-58250
ಕಂಪ್ಯೂಟರ್ ಆಪರೇಟರ್230350-58250
ವಾಹನ ಚಾಲಕರು427650-52650
ನಾಲ್ಕನೇ ದರ್ಜೆ ನೌಕರರು2323500-47650

ಶೈಕ್ಷಣಿಕ ಅರ್ಹತೆ :
• ಶಾಖಾ ವ್ಯವಸ್ಥಾಪಕರು & ಹಿರಿಯ ಸಹಾಯಕರು – ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯಲ್ಲಿ ತೇರ್ಗಡೆಯಾಗಿರಬೇಕು.

• ಶೀಘ್ರಲಿಪಿಗಾರರು – ದ್ವಿತೀಯ ಪಿಯುಸಿಯಲ್ಲಿ ಅಥವಾ 3 ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ನಲ್ಲಿ ಉತ್ತೀರ್ಣರಾಗಿರಬೇಕು. ಸೀನಿಯರ್ ಕನ್ನಡ 0ಮತ್ತು ಇಂಗ್ಲಿಷ್ ಶೀಘ್ರಲಿಪಿಯಲ್ಲಿ ಉತ್ತೀರ್ಣರಾಗಿರಬೇಕು.

• ಕಿರಿಯ ಸಹಾಯಕರು – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

• ಕಂಪ್ಯೂಟರ್ ಆಪರೇಟರ್ – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅಥವಾ 3 ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ನಲ್ಲಿ ಉತ್ತೀರ್ಣರಾಗಿರಬೇಕು. ಸೀನಿಯರ್ ಕನ್ನಡ ಮತ್ತು ಇಂಗ್ಲಿಷ್ ಟೈಪಿಂಗ್ ನಲ್ಲಿ ಉತ್ತೀರ್ಣರಾಗಿರಬೇಕು.

• ವಾಹನ ಚಾಲಕರು – ಎಸ್.ಎಸ್.ಎಲ್.ಸಿಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಲಘು ಮತ್ತು ಭಾರಿ ವಾಹನ ಚಾಲನೆ ಪರವಾನಗಿ ಹೊಂದಿರಬೇಕು.

• ನಾಲ್ಕನೇ ದರ್ಜೆ ನೌಕರರು – ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
(ವಾಹನ ಚಾಲಕರು ಮತ್ತು ನಾಲ್ಕನೇ ದರ್ಜೆ ನೌಕರರು ಹುದ್ದೆ ಹೊರತುಪಡಿಸಿ ಉಳಿದ ಹುದ್ದೆಗಳಿಗೆ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು ಹಾಗೂ ಎಲ್ಲಾ ಹುದ್ದೆಗಳಿಗೆ ಕನ್ನಡವನ್ನು ಓದುವ ಸಾಮರ್ಥ್ಯದ ಜೊತೆಗೆ ಕನ್ನಡದ ಜ್ಞಾನ, ಬರೆಯುವಿಕೆ, ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಬೇಕು)

ಉದ್ಯೋಗ ಮಾಹಿತಿ : 10ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ ಕರ್ನಾಟಕ ಅಂಚೆ ವೃತ್ತದಲ್ಲಿ ಬೃಹತ್ ನೇಮಕಾತಿ 2023

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• 2ಎ, 2ಬಿ, 3ಎ, 3ಬಿ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ/ ಪ.ಪಂ/ ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ವಿಧಾನ :
• ದರ್ಜೆ ಸಹಾಯಕ & ಇದರ ಮೇಲ್ಪಟ್ಟ ಹುದ್ದೆ – ಲಿಖಿತ ಪರೀಕ್ಷೆಯಲ್ಲಿ ಪಡೆಯಲಾದ ಅಂಕಗಳ ಶೇಕಡಾವಾರು ಆಧಾರದ ಮೇಲೆ 1:5ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು‌.
• ಕಂಪ್ಯೂಟರ್ ಆಪರೇಟರ್ & ಶೀಘ್ರಲಿಪಿಗಾರರ ಹುದ್ದೆ – ಲಿಖಿತ ಪರೀಕ್ಷೆ, ಕಂಪ್ಯೂಟರ್ ಪರೀಕ್ಷೆ, ಶಾರ್ಟ್ ಹ್ಯಾಂಡ್ ಅಥವಾ ಟೈಪಿಂಗ್ ಪರೀಕ್ಷೆಯಲ್ಲಿ ಪಡೆಯಲಾದ ಅಂಕಗಳ ಶೇಕಡಾವಾರು ಆಧಾರದ ಮೇಲೆ 1:5ರ ಅನುಪಾತದಲ್ಲಿ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು‌.
• ಗ್ರೂಪ್ ಡಿ ಹುದ್ದೆ – ನಿರ್ದಿಷ್ಟಪಡಿಸಲಾದ ಅರ್ಹತೆಯುಳ್ಳ ಲಿಖಿತ ಪರೀಕ್ಷೆಯಲ್ಲಿ ಪಡೆದುಕೊಂಡ ಪ್ರತಿಶತ ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು‌.

ಉದ್ಯೋಗ ಮಾಹಿತಿ : ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದಲ್ಲಿ ನೇಮಕಾತಿ 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 1500
• ಪ‌.ಜಾತಿ, ಪ.ಪಂ., ಪ್ರ1, ಅಂಗವಿಕಲ, ಮಾ.ಸೈನಿಕ ಅಭ್ಯರ್ಥಿಗಳು – ರೂ. 750

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 30, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರವರಿ 28, 2023
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಫೆಬ್ರವರಿ 28, 2023

Bangalore DCC Bank Recruitment 2023 : Important Links

SHORT NOTIFICATION CLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

1 thought on “Bangalore DCC Bank Recruitment 2023 – Apply Online for 96 Branch Manager, Junior Assistant, Computer Operator, Driver and Various Posts”

Leave a Comment