Bangalore Rural Zilla Panchayat Recruitment 2022 : ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Bangalore Rural Zilla Panchayat Recruitment 2022 : Details of Vacancies
ಹುದ್ದೆ : ಕರವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆಂಟ್ (ಜವಾನ), ಕ್ಲೀನರ್ (ಸ್ವಚ್ಛತಾಗಾರ)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಕರವಸೂಲಿಗಾರರು | 4 |
ಡಾಟಾ ಎಂಟ್ರಿ ಆಪರೇಟರ್ | 4 |
ಅಟೆಂಡೆಂಟ್ (ಜವಾನ) | 8 |
ಕ್ಲೀನರ್ (ಸ್ವಚ್ಛತಾಗಾರ) | 34 |
ಶೈಕ್ಷಣಿಕ ಅರ್ಹತೆ :
ಕರವಸೂಲಿಗಾರರು – ಕನ್ನಡವನ್ನು ಒಂದು ವಿಷಯವನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಮೂರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು. |
ಡಾಟಾ ಎಂಟ್ರಿ ಆಪರೇಟರ್ – ಕನ್ನಡವನ್ನು ಒಂದು ವಿಷಯವನ್ನಾಗಿ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಂಪ್ಯೂಟರ್ ತರಬೇತಿ ಕೋರ್ಸ್ ನಲ್ಲಿ ಕೇಂದ್ರ ಅಥವಾ ರಾಜ್ಯ ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಸ್ಥೆಯಿಂದ ಆರು ತಿಂಗಳು ತರಬೇತಿ ಪಡೆದಿರುವ ಪ್ರಮಾಣ ಪತ್ರ ಹೊಂದಿರಬೇಕು. |
ಅಟೆಂಡೆಂಟ್ ಹಾಗೂ ಕ್ಲೀನರ್ – ಕನ್ನಡವನ್ನು ಒಂದು ವಿಷಯವನ್ನಾಗಿ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. |
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕಾರ್ಮಿಕ ಇಲಾಖೆಯಿಂದ ನಿಗದಿಪಡಿಸುವ ಕನಿಷ್ಠ ವೇತನ ನೀಡಲಾಗುತ್ತದೆ.
ವಯೋಮಾನ :
ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
ಹಿಂ. ವರ್ಗ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
ಪ.ಜಾತಿ/ಪ.ಪಂ/ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಆಯ್ಕೆ ವಿಧಾನ : ಕರವಸೂಲಿಗಾರರು, ಅಟೆಂಡೆಂಟ್, ಕ್ಲೀನರ್ ಹುದ್ದೆಗಳಿಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಗರಿಷ್ಠ ಅಂಕಗಳು ಹಾಗೂ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ನೇರ ನೇಮಕಾತಿ 2022
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಜಿಲ್ಲಾ ಪಂಚಾಯತದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.
ನಿಗದಿತ ಅರ್ಜಿ ಶುಲ್ಕದ ವಿವರ :
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300
ಹಿಂದುಳಿದ ವರ್ಗದ ಅಭ್ಯರ್ಥಿಗಳು ರೂ. 200
ಪ.ಜಾತಿ, ಪ.ಪಂ. ಅಭ್ಯರ್ಥಿಗಳು ರೂ. 100
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನಿಗಧಿತ ಶುಲ್ಕ ಪಾವತಿಸಬೇಕು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಮೇ 21, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜೂನ್ 06, 2022
Bangalore Rural Zilla Panchayat Recruitment 2022 : Important Links
ಅಧಿಸೂಚನೆ | Click Here |
ಅರ್ಜಿ ಸಲ್ಲಿಸಿ | Click Here |
ಇತರೆ ಮಾಹಿತಿ : ಅಭ್ಯರ್ಥಿಗಳು ಖಾಲಿ ಇರುವ ಹುದ್ದೆಗಳಿಗೆ ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಆಯಾ ಗ್ರಾಮ ಪಂಚಾಯಿತಿಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.