Bangalore Urban DC Office Recruitment 2023 – Apply for 105 Loaders and Cleaners Posts

Bangalore Urban DC Office Recruitment 2023 : ಬೆಂಗಳೂರು ನಗರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲೀನರ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಕನಿಷ್ಠ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bangalore Urban DC Office Recruitment 2023 : Details of Vacancies

ಹುದ್ದೆ : ಲೋಡರ್ಸ್ ಮತ್ತು ಕ್ಲೀನರ್ಸ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲೆಯ ಹೆಬ್ಬಗೋಡಿ ನಗರಸಭೆ, ಮಾದನಾಯಕನಹಳ್ಳಿ ನಗರಸಭೆ, ಆನೇಕಲ್ ಪುರಸಭೆ, ಅತ್ತಿಬೆಲೆ ಪುರಸಭೆ, ಬೊಮ್ಮಸಂದ್ರ ಪುರಸಭೆ, ಚಂದಾಪುರ ಪುರಸಭೆ, ಜಿಗಣಿ ಪುರಸಭೆ, ಹುಣಸಮಾರನಹಳ್ಳಿ ಪುರಸಭೆ, ಚಿಕ್ಕಬಾಣಾವರ ಪುರಸಭೆಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 105 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಲೋಡರ್ಸ್83
ಕ್ಲೀನರ್ಸ್22

ಕನಿಷ್ಠ ಅರ್ಹತೆ : ವಿದ್ಯಾರ್ಹತೆ ಅನ್ವಯಿಸುವುದಿಲ್ಲ. ಕನ್ನಡ ಮಾತನಾಡಲು ಗೊತ್ತಿರಬೇಕು. ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್ಸ್/ ಕ್ಲೀನರ್ಸ್ ಹುದ್ದೆಯಲ್ಲಿ ಹಾಲಿ ಕ್ಷೇಮಾಭಿವೃದ್ಧಿ/ ದಿನಗೂಲಿ/ ಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನ/ಹೊರಗುತ್ತಿಗೆ ಆಧಾರದಲ್ಲಿ ಕನಿಷ್ಠ 2 ವರ್ಷಕ್ಕಿಂತ ಕಡಿಮೆಯಿಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಲೋಡರ್ಸ್ ಮತ್ತು ಕ್ಲೀನರ್ಸ್ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 55 ವರ್ಷ ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ಆದೇಶ ಜಾರಿಕಾರ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಅಭ್ಯರ್ಥಿಗಳು ಸಂಬಂಧಿಸಿದ ನಗರ ಸ್ಥಳೀಯ ಸಂಸ್ಥೆಗಳಿಗೆ ಭೇಟಿ ನೀಡಿ, ನಿಗಧಿತ ಅರ್ಜಿ ನಮೂನೆಯನ್ನು ಪಡೆದುಕೊಳ್ಳಬೇಕು ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 2 : ಅಪ್ಲಿಕೇಷನ್ ಫಾರ್ಮ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, ಅಪ್ಲಿಕೇಷನ್ ಫಾರ್ಮ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಯನ್ನು ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ, ಜಿಲ್ಲಾಧಿಕಾರಿಗಳ ಕಾರ್ಯಾಲಯ, 4ನೇ ಮಹಡಿ, ಬೆಂಗಳೂರು ನಗರ ಜಿಲ್ಲೆ

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 08, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 15, 2023

Bangalore Urban DC Office Recruitment 2023 : Important Links

NOTIFICATION & APPLICATION FORM CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment