Bangalore Urban Zilla Panchayat Recruitment 2022 – Apply for 10 BFT Posts

Bangalore Urban Zilla Panchayat Recruitment 2022 : ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯಲ್ಲಿ ಅಗತ್ಯವಿರುವ ಭೇರ್ ಪೂಟ್ ಟೆಕ್ನೀಷಿಯನ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bangalore Urban Zilla Panchayat Recruitment 2022 : Details of Vacancies

ಹುದ್ದೆ : ಭೇರ್ ಪೂಟ್ ಟೆಕ್ನೀಷಿಯನ್ಸ್ (ಬಿ.ಎಫ್.ಟಿ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿಯ ಆನೇಕಲ್, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ ಹಾಗೂ ಯಲಹಂಕ ತಾಲ್ಲೂಕುಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 10 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ, ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಉದ್ಯೋಗ ಮಾಹಿತಿ : ಗ್ರಾಮ ಪಂಚಾಯ್ತಿ ಗ್ರಂಥಾಲಯದಲ್ಲಿ ನೇರ ನೇಮಕಾತಿ 2022

ಇತರೆ ಅರ್ಹತೆ : ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸ್ಥಳೀಯರಾಗಿರಬೇಕು ಹಾಗೂ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರನಾಗಿರಬೇಕು. (ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಸಕ್ರಿಯ ಕೆಲಸಗಾರರು ಎಂದರೆ ಸದರಿ ವ್ಯಕ್ತಿಯು ಹಿಂದಿನ 3 ವರ್ಷಗಳಲ್ಲಿ ಕನಿಷ್ಠ 2 ವರ್ಷಗಳಲ್ಲಿ 25 ದಿನಗಳಿಗೆ ಕಡಿಮೆ ಇಲ್ಲದಷ್ಟು ಯೋಜನೆಯಡಿ ಕೂಲಿಗಾರರಾಗಿ ಕೆಲಸ ಮಾಡಿರಬೇಕು)

ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲಾ ಪಂಚಾಯ್ತಿಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.

ಕಛೇರಿ ವಿಳಾಸ : ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಎಸ್. ಕರಿಯಪ್ಪ ರಸ್ತೆ, ಕನಕಪುರ ರಸ್ತೆ, ಬನಶಂಕರಿ ದೇವಸ್ಥಾನದ ಹತ್ತಿರ, ಬೆಂಗಳೂರು – 560070

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 18, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಫೆಬ್ರುವರಿ 28, 2022

Bangalore Urban Zilla Panchayat Recruitment 2022 : Important Links

ಪ್ರಕಟಣೆClick Here
ಅರ್ಜಿ ನಮೂನೆClick Here

ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ – 080-26716169

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

1 thought on “Bangalore Urban Zilla Panchayat Recruitment 2022 – Apply for 10 BFT Posts”

Leave a Comment