Bangaluru Rural Zilla Panchayat Recruitment 2022 – Apply Now SLWM Consultant Post

Bangaluru Rural Zilla Panchayat Recruitment 2022 : ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯಲ್ಲಿ ಅಗತ್ಯವಿರುವ ಸಮಾಲೋಚಕರು ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bangaluru Rural Zilla Panchayat Recruitment 2022 : Details of Vacancies

ಹುದ್ದೆ : ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆ ಸಮಾಲೋಚಕರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಸಿವಿಲ್ ಇಂಜಿನಿಯರಿಂಗ್/ ಎನ್ವಿರಾನ್ಮೆಂಟಲ್ ಇಂಜಿನಿಯರಿಂಗ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.

ವಯೋಮಾನ : ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,000 ವೇತನ ನೀಡಲಾಗುತ್ತದೆ

ಅನುಭವ : ಕನಿಷ್ಠ 3 ವರ್ಷಗಳ ಅನುಭವ ಹಾಗೂ ನೀರು ಮತ್ತು ನೈರ್ಮಲ್ಯ/ ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸಿದವರಿಗೆ ಆದ್ಯತೆ ನೀಡಲಾಗುವುದು.

ಆಯ್ಕೆ ವಿಧಾನ : ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಗ್ರೂಪ್ ’ಸಿ’ ಹುದ್ದೆಗಳ ನೇಮಕಾತಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಕಛೇರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್,
ಬೀರಸಂದ್ರ, ಚಪ್ಪರದಕಲ್ಲು, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ – 562110

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 03, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 31, 2022

Bangaluru Rural Zilla Panchayat Recruitment 2022 : Important Links

ಅಧಿಸೂಚನೆ & ಅರ್ಜಿ ನಮೂನೆ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment