
Bank of Baroda Recruitment 2026 : ಬ್ಯಾಂಕ್ ಆಫ್ ಬರೋಡಾದಲ್ಲಿ ಅಗತ್ಯವಿರುವ ವೆಲ್ತ್ ಎಕ್ಸಿಕ್ಯೂಟಿವ್, ಕ್ರೆಡಿಟ್ ಅನಾಲಿಸ್ಟ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Bank of Baroda Recruitment 2026 : Details of Vacancies
ಹುದ್ದೆ :
ವೆಲ್ತ್ ಎಕ್ಸಿಕ್ಯೂಟಿವ್, ಕ್ರೆಡಿಟ್ ಅನಾಲಿಸ್ಟ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 1100 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
| ಹುದ್ದೆ | ಹುದ್ದೆಗಳ ಸಂಖ್ಯೆ |
| ವೆಲ್ತ ಎಕ್ಸಿಕ್ಯೂಟಿವ್ | 1000 |
| ಕ್ರೆಡಿಟ್ ಅನಾಲಿಸ್ಟ್ | 100 |
ಶೈಕ್ಷಣಿಕ ಅರ್ಹತೆ :
ವೆಲ್ತ್ ಎಕ್ಸಿಕ್ಯೂಟಿವ್ –
ಯಾವುದೇ ಪದವಿ ವಿದ್ಯಾರ್ಹತೆ ಮತ್ತು
ಈ ಕೆಳಗಿನವುಗಳಲ್ಲಿ ಯಾವುದಾದರೂ ಒಂದು ಮಾನ್ಯತೆ ಪಡೆದ ಪ್ರಮಾಣಪತ್ರ ಹೊಂದಿರಬೇಕು
• IC 38 from Insurance Institute of India
• NISM Series V A: Mutual Fund Distributors Certification Examination.
• NISM Series XXI-A: Portfolio Management Services (PMS) Distributors Certification Examination.
• NISM Series V-D: Mutual Fund- Specialised Investment Fund Distributors Certification Examination.
ಕ್ರೆಡಿಟ್ ಅನಾಲಿಸ್ಟ್ –
ಯಾವುದೇ ಪದವಿ ವಿದ್ಯಾರ್ಹತೆ ಮತ್ತು ಚಾರ್ಟರ್ಡ್ ಅಕೌಂಟೆಂಟ್ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ ಜ್ಯೂನಿಯರ್ ಇಂಜಿನಿಯರ್ ನೇಮಕಾತಿ 2026
ವಯೋಮಾನ (ದಿನಾಂಕ 01/09/2026ಕ್ಕೆ) :
| ಹುದ್ದೆ | ವಯೋಮಾನ |
| ವೆಲ್ತ ಎಕ್ಸಿಕ್ಯೂಟಿವ್ | ಕನಿಷ್ಠ 22 ವರ್ಷ ಗರಿಷ್ಠ 32 ವರ್ಷ |
| ಕ್ರೆಡಿಟ್ ಅನಾಲಿಸ್ಟ್ | ಕನಿಷ್ಠ 21 ವರ್ಷ ಗರಿಷ್ಠ 33 ವರ್ಷ |
ವಯೋಮಿತಿ ಸಡಿಲಿಕೆ :
- ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
- ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 5 ವರ್ಷ
- ಪಿಡಬ್ಲ್ಯೂಬಿಡಿ (ಜನರಲ್/ಇಡಬ್ಲ್ಯೂಎಸ್) ಅಭ್ಯರ್ಥಿಗಳಿಗೆ – 10 ವರ್ಷ
- ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ – 13 ವರ್ಷ
- ಪಿಡಬ್ಲ್ಯೂಬಿಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ – 15 ವರ್ಷ
ವೇತನ :
| ಹುದ್ದೆ | ವೇತನ |
| ವೆಲ್ತ ಎಕ್ಸಿಕ್ಯೂಟಿವ್ | ರೂ. 48,480 – ರೂ. 85,920 |
| ಕ್ರೆಡಿಟ್ ಅನಾಲಿಸ್ಟ್ | ರೂ. 64,820 – 93,960 |
ಆಯ್ಕೆ ವಿಧಾನ :
- ಆನ್‌ಲೈನ್ ಪರೀಕ್ಷೆ
- ಸೈಕೋಮೆಟ್ರಿಕ್ ಟೆಸ್ಟ್
- ಗ್ರೂಪ್ ಡಿಸ್ಕಷನ್/ಸಂದರ್ಶನ
ಆನ್‌ಲೈನ್ ಪರೀಕ್ಷಾ ಮಾದರಿ –
| Name of the Tests | No. Of Questions | Maximum Marks | Duration |
| English Language | 20 | 20 | 20 Minutes |
| Reasong Ability & Quantitat Aptitude | 20 | 20 | 20 Minutes |
| General/ Economics & Banking Awareness | 20 | 20 | 20 Minutes |
| Professional Knowledge Related to the Position | 60 | 60 | 60 Minutes |
ಪರೀಕ್ಷಾ ಕೇಂದ್ರಗಳು :
ಬೆಂಗಳೂರು, ಹುಬ್ಬಳ್ಳಿ/ಧಾರವಾಡ, ಮೈಸೂರು, ಕಲಬುರಗಿ, ಉಡುಪಿ, ಶಿವಮೊಗ್ಗ, ಮಂಗಳೂರು, ಬೆಳಗಾವಿ.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ :
- ಜನರಲ್, ಇಡಬ್ಲ್ಯೂಎಸ್, ಒಬಿಸಿ ಅಭ್ಯರ್ಥಿಗಳು – ರೂ. 850
- ಪ.ಜಾತಿ, ಪ.ಪಂ., ಪಿಡಬ್ಲ್ಯೂಬಿಡಿ, ಮಾ.ಸೈನಿಕ, ಮಹಿಳಾ ಅಭ್ಯರ್ಥಿಗಳು – ರೂ. 175
ಶುಲ್ಕ ಪಾವತಿಸುವ ವಿಧಾನ :
ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಸೆಪ್ಟೆಂಬರ್ 04, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 24, 2026
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 24, 2026
Bank of Baroda Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.