Barefoot Technician (BFT) Recruitment 2022 : ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಪಂಚಾಯ್ತಿಯಲ್ಲಿ ಅಗತ್ಯವಿರುವ ಭೇರ್ ಪೂಟ್ ಟೆಕ್ನೀಷಿಯನ್ಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Barefoot Technician (BFT) Recruitment 2022 : Details of Vacancies
ಹುದ್ದೆ : ಭೇರ್ ಪೂಟ್ ಟೆಕ್ನೀಷಿಯನ್ಸ್ (ಬಿ.ಎಫ್.ಟಿ)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರಿನ ಗ್ರಾಮ ಪಂಚಾಯ್ತಿಗಳಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 14 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು 10ನೇ ತರಗತಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ವಯೋಮಾನ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ವೇತನ ನೀಡಲಾಗುತ್ತದೆ.
ಇತರೆ ಮಾಹಿತಿ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಸ್ಥಳೀಯ ಗ್ರಾಪಂ ವ್ಯಾಪ್ತಿಯ ಅಭ್ಯರ್ಥಿಗಳಾಗಿರಬೇಕು. ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಹಿಂದಿನ 3 ಅಥವಾ 2 ವರ್ಷಗಳಲ್ಲಿ 25 ದಿನಗಳಿಗೆ ಕಡಿಮೆ ಇಲ್ಲದಷ್ಟು ಕೂಲಿಗಾರರಾಗಿ ಕೆಲಸ ಮಾಡಿರಬೇಕು. ಜೊತೆಗೆ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ನರೇಗಾ ಜಾಬ್ ಕಾರ್ಡ್, ಜಾತಿ ಪ್ರಮಾಣ ಪತ್ರ ಹೊಂದಿರಬೇಕು.
ಗ್ರಾಮ ಪಂಚಾಯ್ತಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ನಗರದ ಉರ್ವಸ್ಟೋರ್ ನಲ್ಲಿರುವ ಜಿಲ್ಲಾ ಪಂಚಾಯ್ತಿ ಕಚೇರಿಯಲ್ಲಿರುವ ಅಭಿವೃದ್ಧಿ ಶಾಖೆಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 04, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 15, 2022
Barefoot Technician (BFT) Recruitment 2022 : Important Links
ಪ್ರಕಟಣೆ | Click Here |
ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 0824-2451036
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.