BBMP Pourakarmika Recruitment 2024 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ‘ಡಿ’ ಗ್ರೂಪ್ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
BBMP Pourakarmika Recruitment 2024 : Details of Vacancies
ಹುದ್ದೆ : ಪೌರಕಾರ್ಮಿಕರು (ಗ್ರೂಪ್ ‘ಡಿ’)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 11,307 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ವೃಂದ | ಹುದ್ದೆಗಳ ಸಂಖ್ಯೆ |
ಉಳಿಕೆ ಮೂಲ ವೃಂದ | 10402 |
ಕಲ್ಯಾಣ-ಕರ್ನಾಟಕ ವೃಂದ | 905 |
ಅರ್ಹತೆಗಳು :
• ಕನ್ನಡ ಭಾಷೆ ಮಾತನಾಡಲು ತಿಳಿದಿರಬೇಕು.
• ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಡಿಯಲ್ಲಿನ ತ್ಯಾಜ್ಯ ನಿರ್ವಹಣೆ ಕಾರ್ಯಗಳಲ್ಲಿ ಹಾಲಿ ನೇರಪಾವತಿ ಅಥವಾ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ (ಪೌರಕಾರ್ಮಿಕರು) ಆಧಾರದ ಮೇಲೆ ಕನಿಷ್ಠ 2 ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಸೇವೆಯನ್ನು ಸಲ್ಲಿಸಿರುವ ಹಾಗೂ ಸದರಿ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ (ಅಂದರೆ ದಿನಾಂಕ : 02-03-2023) ಕಾರ್ಯ ನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ಟೈಪಿಸ್ಟ್ ಹುದ್ದೆಗಳ ನೇಮಕಾತಿ 2024
ವಯೋಮಿತಿ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 55 ವರ್ಷ ಮೀರಿರಬಾರದು.
ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಉದ್ಯೋಗ ಮಾಹಿತಿ : ಕರ್ನಾಟಕ ಕಂದಾಯ ಇಲಾಖೆಯಲ್ಲಿ ಖಾಲಿಯಿರುವ ವಿಲೇಜ್ ಅಕೌಂಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಸಂಬಂಧಪಟ್ಟ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು (ಘನತ್ಯಾಜ್ಯ ನಿರ್ವಹಣೆ) ರವರ ಕಛೇರಿಗೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು.
ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮಾರ್ಚ್ 15, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 15, 2024 ಮೇ 15, 2024
BBMP Recruitment 2024 : Important Links
DATE EXTENDED NOTIFICATION | CLICK HERE |
NOTIFICATION | CLICK HERE |
APPLICATION FORM | CLICK HERE |
Telegram Join Link | Click Here |
WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.