BBMP Recruitment 2022 – Walk-in Interview for 940 Lab Technician, Nurse Posts

BBMP Recruitment 2022 : ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗುವ “ನಮ್ಮ ಕ್ಲಿನಿಕ್” ಗಳಲ್ಲಿ ಕರ್ತವ್ಯ ನಿರ್ವಹಿಸಲು ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

BBMP Recruitment 2022 : Details of Vacancies

ಹುದ್ದೆ : ವೈದ್ಯಾಧಿಕಾರಿಗಳು, ಶುಶ್ರೂಷಕಿ/ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞರು, ನಾಲ್ಕನೇ ದರ್ಜೆ ನೌಕರರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 940 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ ವೇತನ
ವೈದ್ಯಾಧಿಕಾರಿಗಳು23547,250
ಶುಶ್ರೂಷಕಿ/ಶುಶ್ರೂಷಕರು23515,750
ಪ್ರಯೋಗಶಾಲಾ ತಂತ್ರಜ್ಞರು23514,609
ನಾಲ್ಕನೇ ದರ್ಜೆ ನೌಕರರು23510,500

ಶೈಕ್ಷಣಿಕ ಅರ್ಹತೆ :

ವೈದ್ಯಾಧಿಕಾರಿಗಳು – ಎಂ.ಬಿ.ಬಿ.ಎಸ್ ಪದವಿ ಮತ್ತು ಕೆ.ಎಂ.ಸಿ ಕೌನ್ಸಿಲ್ ನೋಂದಾವಣಿ ಹೊಂದಿರಬೇಕು.
ಶುಶ್ರೂಷಕಿ/ಶುಶ್ರೂಷಕರು – ಬಿ.ಎಸ್.ಸಿ/ ಡಿಪ್ಲೋಮಾ ಇನ್ ನರ್ಸಿಂಗ್ ಮತ್ತು ಕೆ.ಎಂ.ಸಿ ಕೌನ್ಸಿಲ್ ನೋಂದಾವಣಿ ಹೊಂದಿರಬೇಕು.
ಪ್ರಯೋಗಶಾಲಾ ತಂತ್ರಜ್ಞರು – ಡಿಪ್ಲೋಮಾ ಇನ್ ಪ್ರಯೋಗಶಾಲಾ ತಂತ್ರಜ್ಞಾನ (ಬಿ.ಎಂ.ಎಲ್.ಟಿ) ಮತ್ತು ಕರ್ನಾಟಕ ಸರ್ಕಾರ ಪ್ಯಾರಾ ಮೆಡಿಕಲ್ ಮಂಡಳಿಯ ನೋಂದಣಿ ಹೊಂದಿರಬೇಕು. ಗಣಕಯಂತ್ರ ಜ್ಞಾನ ಹೊಂದಿರಬೇಕು.
ನಾಲ್ಕನೇ ದರ್ಜೆ ನೌಕರರು – ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಆಯ್ಕೆ ವಿಧಾನ : ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ 01 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ವಾಕ್ ಇನ್ ಆಯ್ಕೆ ಪ್ರಕ್ರಿಯೆ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು

ಉದ್ಯೋಗ ಮಾಹಿತಿ : ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವ ಬ್ಯಾಂಕ್ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬಿಬಿಎಂಪಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬಿಬಿಎಂಪಿ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ವಿದ್ಯಾರ್ಹತೆಯ ಮೂಲ ದಾಖಲೆಗಳು, ಒಂದು ಸ್ವಯಂ ದೃಢೀಕೃತ ಜೆರಾಕ್ಸ್ ಪ್ರತಿ ಮತ್ತು 2 ಜೊತೆ ಭಾವಚಿತ್ರದೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.

ಸಂದರ್ಶನ ಸ್ಥಳ : ನೌಕರರ ಭವನ ಸಭಾಂಗಣ, ಬಿಬಿಎಂಪಿ, ಕೇಂದ್ರ ಕಛೇರಿ, ಎನ್.ಆರ್.ಚೌಕ, ಬೆಂಗಳೂರು

ಸಂದರ್ಶನ ದಿನಾಂಕ : ನೇರ ಸಂದರ್ಶನ ನಡೆಯುವ ದಿನಾಂಕ : 10/08/2022 ಮತ್ತು 11/08/2022 ಬೆಳಿಗ್ಗೆ 10:30 ಗಂಟೆಯಿಂದ ಸಂಜೆ 4:30 ಗಂಟೆಯವರೆಗೆ

BBMP Recruitment 2022 : Important Links

Notification Click Here
Application Form Click Here
Websitewww.bbmp.gov.in

ಹೆಚ್ಚಿನ ಮಾಹಿತಿಗಾಗಿ ಕಛೇರಿಯನ್ನು ಸಂಪರ್ಕಿಸಿ. ದೂರವಾಣಿ ಸಂಖ್ಯೆ : 080-22975516

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment