BBMP Recruitment 2023 – Apply for 3673 PouraKarmika (Group D) Posts

BBMP Recruitment 2023 – BBMP Group D Recruitment 2023 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಗ್ರೂಪ್ “ಡಿ” ವೃಂದದ ಪೌರಕಾರ್ಮಿಕರು ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

BBMP Recruitment 2023 : Details of Vacancies

ಹುದ್ದೆ : ಪೌರಕಾರ್ಮಿಕರು (ಗ್ರೂಪ್ “ಡಿ”)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 3673 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ವೃಂದಹುದ್ದೆಗಳ ಸಂಖ್ಯೆ
ಉಳಿಕೆ ಮೂಲ ವೃಂದ3243
ಕಲ್ಯಾಣ-ಕರ್ನಾಟಕ ವೃಂದ 430

ಅರ್ಹತೆಗಳು :
• ಕನ್ನಡ ಮಾತನಾಡಲು ಗೊತ್ತಿರಬೇಕು.
• ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯಡಿಯಲ್ಲಿನ ತ್ಯಾಜ್ಯ ನಿರ್ವಹಣೆ ಕಾರ್ಯಗಳಲ್ಲಿ ನೇರಪಾವತಿ ಅಥವಾ ಕ್ಷೇಮಾಭಿವೃದ್ಧಿ ಅಥವಾ ದಿನಗೂಲಿ (ಪೌರಕಾರ್ಮಿಕರು) ಆಧಾರದ ಮೇಲೆ ಕನಿಷ್ಠ 2 ವರ್ಷಗಳಿಗಿಂತ ಕಡಿಮೆ ಇಲ್ಲದಂತೆ ನಿರಂತರವಾಗಿ ಸೇವೆಯನ್ನು ಸಲ್ಲಿಸಿರುವ ಹಾಗೂ ಸದರಿ ನಿಯಮಗಳು ಜಾರಿಗೆ ಬಂದ ದಿನಾಂಕದಿಂದ (ಅಂದರೆ ದಿನಾಂಕ : 23-11-2022) ಕಾರ್ಯ ನಿರ್ವಹಿಸುತ್ತಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 55 ವರ್ಷ ಮೀರಿರಬಾರದು.

ಉದ್ಯೋಗ ಮಾಹಿತಿ : ಗಾರ್ಡನರ್, ಡ್ರೈವರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಪಾಲಿಕೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಪಾಲಿಕೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Application Form Link ಮೇಲೆ ಕ್ಲಿಕ್ ಮಾಡಿ Application ಡೌನ್ಲೋಡ್ ಮಾಡಿಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಕೊನೆಯದಾಗಿ, Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಪಾಲಿಕೆಯ ಆಯಾ ವಾರ್ಡಗೆ ಸಂಬಂಧಿಸಿದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಘನತ್ಯಾಜ್ಯ ನಿರ್ವಹಣೆ) ರವರ ಕಛೇರಿಗೆ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.30 ಗಂಟೆಯೊಳಗೆ ಸಲ್ಲಿಸಬೇಕು.

ಅರ್ಜಿ ಶುಲ್ಕ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 16, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 30, 2023

BBMP Recruitment 2023 : Important Links

NOTIFICATION (RPC)CLICK HERE
NOTIFICATION (HK)CLICK HERE
APPLICATION FORM CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment