ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ನೇಮಕಾತಿ 2023 – BDA Recruitment 2023

BDA Recruitment 2023 : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಪರಿಶಿಷ್ಟ ಪಂಗಡದ (ಬ್ಯಾಕ್ ಲಾಗ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

BDA Recruitment 2023 : Details of Vacancies

ಹುದ್ದೆ : ಬೆರಳಚ್ಚುಗಾರ, ಶೀಘ್ರಲಿಪಿಗಾರ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 02 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಬೆರಳಚ್ಚುಗಾರ121400-42000
ಶೀಘ್ರಲಿಪಿಗಾರ127650-52650

ಶೈಕ್ಷಣಿಕ ಅರ್ಹತೆ :
ಬೆರಳಚ್ಚುಗಾರ – ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಕನ್ನಡ ಮತ್ತು ಇಂಗ್ಲೀಷ್ ಸೀನಿಯರ್ ಗ್ರೇಡ್ ಟೈಪ್‌ರೈಟಿಂಗ್‌ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಶೀಘ್ರಲಿಪಿಗಾರ – ಪಿ.ಯು.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರತಕ್ಕದ್ದು. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಲಾಗುವ ಕನ್ನಡ ಮತ್ತು ಇಂಗ್ಲೀಷ್ ಸೀನಿಯರ್ ಗ್ರೇಡ್ ಟೈಪ್‌ರೈಟಿಂಗ್‌ ಮತ್ತು ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ಬೆರಳಚ್ಚುಗಾರ, ಶೀಘ್ರಲಿಪಿಗಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ತುಂಬಿರಬೇಕು ಹಾಗೂ 40 ವರ್ಷ ಮೀರಿರಬಾರದು. ಮಾಜಿ ಸೈನಿಕರು/ ಅಂಗವಿಕಲರು/ ವಿಧವೆಯರಿಗೆ, ನಿಯಮಾನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ಅನ್ವಯವಾಗುವುದು.

ಆಯ್ಕೆ ವಿಧಾನ : ನಿಗದಿಪಡಿಸಿದ ಶೈಕ್ಷಣಿಕ ಅರ್ಹತಾ ಪರೀಕ್ಷೆಯಲ್ಲಿ ಪಡೆದಿರುವ ಶೇಕಡವಾರು ಅಂಕಗಳನ್ನು ಪರಿಗಣಿಸಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸತಕ್ಕದ್ದು.

ಅರ್ಜಿ ಸಲ್ಲಿಸುವ ವಿಳಾಸ : ಆಯುಕ್ತರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಟಿ.ಚೌಡಯ್ಯ ರಸ್ತೆ, ಕುಮಾರ ಪಾರ್ಕ್ ಪಶ್ಚಿಮ, ಬೆಂಗಳೂರು-560020

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 09, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 08, 2023

BDA Recruitment 2023 : Important Links

NOTIFICATION & APPLICATION FORMCLICK HERE
Telegram Join Link Click Here
WhatsApp Channel Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment