ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನೇಮಕಾತಿ 2025 – BEL Senior Engineer Recruitment 2025

BEL Senior Engineer Recruitment 2025

BEL Senior Engineer Recruitment 2025 : ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ನಲ್ಲಿ ಅಗತ್ಯವಿರುವ ಸೀನಿಯರ್ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

BEL Senior Engineer Recruitment 2025 : Details of Vacancies

ಹುದ್ದೆ : ಸೀನಿಯರ್ ಇಂಜಿನಿಯರ್ (ಫಿಸಿಕಲ್ ಡಿಸೈನ್ ಇಂಜಿನಿಯರ್), ಸೀನಿಯರ್ ಇಂಜಿನಿಯರ್.

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 14 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಸೀನಿಯರ್ ಇಂಜಿನಿಯರ್ (ಫಿಸಿಕಲ್ ಡಿಸೈನ್ ಇಂಜಿನಿಯರ್)2
ಸೀನಿಯರ್ ಇಂಜಿನಿಯರ್12

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :
• ಸೀನಿಯರ್ ಇಂಜಿನಿಯರ್ (ಫಿಸಿಕಲ್ ಡಿಸೈನ್ ಇಂಜಿನಿಯರ್) – ಎಂ.ಇ/ ಎಂ.ಟೆಕ್ ಇನ್ ವಿ.ಎಲ್.ಎಸ್.ಐ ಡಿಸೈನ್/ ಮೈಕ್ರೋಇಲೆಕ್ಟ್ರಾನಿಕ್ಸ್.
• ಸೀನಿಯರ್ ಇಂಜಿನಿಯರ್ – ಬಿ.ಇ/ ಬಿ.ಟೆಕ್ ಇನ್ ಇಲೆಕ್ಟ್ರಾನಿಕ್ಸ್ / ಮೆಕ್ಯಾನಿಕಲ್ ಇಂಜಿನಿಯರಿಂಗ್.

ಉದ್ಯೋಗ ಮಾಹಿತಿ : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನೇಮಕಾತಿ 2025

ವಯೋಮಾನ : ದಿನಾಂಕ 01/04/2025ಕ್ಕೆ ಅಭ್ಯರ್ಥಿಗಳು ಗರಿಷ್ಠ 32 ವರ್ಷ ವಯೋಮಾನ ಮೀರಿರಬಾರದು.

ವಯೋಮಿತಿ ಸಡಿಲಿಕೆ :
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – 05 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000 ರಿಂದ ರೂ. 1,60,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಅನುಭವ : ಅಭ್ಯರ್ಥಿಗಳು ಕನಿಷ್ಠ 2 ರಿಂದ 4 ವರ್ಷಗಳ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಕಳುಹಿಸಿ.

ಅರ್ಜಿ ಸಲ್ಲಿಸುವ ವಿಳಾಸ : Deputy General Manager (HR), Product Development & Innovation Centre (PDIC), Bharat Electronics Limited, Prof. U R Rao Road, Near Nagaland Circle, Jalahalli Post, Bengaluru – 560013, India.

ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಪಿಡಬ್ಲ್ಯೂಬಿಡಿ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
• ಉಳಿದ ಅಭ್ಯರ್ಥಿಗಳಿಗೆ – ರೂ. 600

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅಥವಾ ಚಲನ್ ಪ್ರಿಂಟ್ ತೆಗೆದು ಯಾವುದೇ ಎಸ್.ಬಿ.ಐ ಬ್ಯಾಂಕಿನ ಶಾಖೆಯಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಏಪ್ರಿಲ್ 28, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 19, 2025

BEL Senior Engineer Recruitment 2025 : Important Links

NOTIFICATIONCLICK HERE
APPLICATION FORM CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment