Belagavi District Court Recruitment 2021 : 31 ಪಿಯೋನ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Belagavi District Court Recruitment 2021 : ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ಪಿಯೋನ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Belagavi District Court Recruitment 2021 : Details of Vacancies

ಹುದ್ದೆ : ಸಿಪಾಯಿ (ಪಿಯೋನ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಳಗಾವಿ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 31 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ :
• ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.
• ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 17,000 ರಿಂದ ರೂ. 28,950 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ

ಆಯ್ಕೆ ವಿಧಾನ : ಸಿಪಾಯಿ ಹುದ್ದೆಗೆ 1:10 ರ ಅನುಪಾತದಲ್ಲಿ ನಿಗದಿಪಡಿಸಿದ ಶೈಕ್ಷಣಿಕ ಪರೀಕ್ಷೆಗಳ ಅಂಕಗಳ ಒಟ್ಟು ಸರಾಸರಿ ಆಧಾರದ ಮೇಲೆ ಮೆರಿಟ್ ವೈಸ್ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು

ಉದ್ಯೋಗ ಮಾಹಿತಿ : Tumkur District Court Recruitment 2021 : 21 ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ಪಿಯೋನ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬೆಳಗಾವಿ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
• ಪ್ರವರ್ಗ 2ಎ,2ಬಿ,3ಎ,3ಬಿ, ಸಾಮಾನ್ಯ ಅಭ್ಯರ್ಥಿಗಳು ರೂ. 200
• ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು ಅಥವಾ ಬೆಳಗಾವಿ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 23, 2021
ಅರ್ಜಿ ಸಲ್ಲಿಸಲು, ಆನ್‌ಲೈನ್‌ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ 25, 2021
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ 29, 2021

Belagavi District Court Recruitment 2021 : Important Links

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment