Belagavi District Court Recruitment 2023 – Apply Online for 68 Stenographer, Process Server, Peon Posts

Belagavi District Court Recruitment 2023 : ಬೆಳಗಾವಿ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ಕರ್ತವ್ಯ ಸ್ಥಳ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Belagavi District Court Recruitment 2023 : Details of Vacancies

ಹುದ್ದೆ : ಶೀಘ್ರಲಿಪಿಗಾರರು ಗ್ರೇಡ್ 3, ಆದೇಶ ಜಾರಿಕಾರರು, ಸಿಪಾಯಿ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಳಗಾವಿ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 68 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಶೀಘ್ರಲಿಪಿಗಾರರು ಗ್ರೇಡ್ 31827650-52650
ಆದೇಶ ಜಾರಿಕಾರರು619950-37900
ಸಿಪಾಯಿ4417000-28950

ಶೈಕ್ಷಣಿಕ ಅರ್ಹತೆ :
• ಶೀಘ್ರಲಿಪಿಗಾರರು – 1) ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸುವ ದ್ವಿತೀಯ ವರ್ಷದ ಪದವಿ ಪೂರ್ವ ಶಿಕ್ಷಣ ಕೋರ್ಸಿನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯು ನಡೆಸುವ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
2) ಕರ್ನಾಟಕ ಸರ್ಕಾರದ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸುವ ಕನ್ನಡ ಹಾಗೂ ಆಂಗ್ಲ ಭಾಷೆಯ ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಮತ್ತು ಕನ್ನಡ ಹಾಗೂ ಆಂಗ್ಲ ಭಾಷೆಯ ಬೆರಳಚ್ಚು ಹಿರಿಯ ದರ್ಜೆ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅಥವಾ ಡಿಪ್ಲೋಮಾ ಇನ್ ಕಮರ್ಷಿಯಲ್ ಪ್ರ್ಯಾಕ್ಟೀಸ್ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಹಾಗೂ ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

• ಆದೇಶ ಜಾರಿಕಾರರು – ಅಭ್ಯರ್ಥಿಯು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಲಘು ಹಾಗೂ ಭಾರಿ ವಾಹನ ಚಾಲನಾ ಪರವಾನಿಗೆ ಪತ್ರ ಹೊಂದಿದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

• ಸಿಪಾಯಿ – ಅಭ್ಯರ್ಥಿಯು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ಉದ್ಯೋಗ ಮಾಹಿತಿ : ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023

ವಯೋಮಾನ : ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
• ಪ.ಜಾತಿ, ಪ.ಪಂ., ಪ್ರವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ

ಆಯ್ಕೆ ವಿಧಾನ :
• ಶೀಘ್ರಲಿಪಿಗಾರ ಹುದ್ದೆಗೆ ನಡೆಸುವ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣ ಹೊಂದಿದ ಅಭ್ಯರ್ಥಿಗಳ ಹಾಗೂ ಅವರ ನಿಗದಿಪಡಿಸಿದ ಶೈಕ್ಷಣಿಕ ಪರೀಕ್ಷೆಗಳ ಅಂಕಗಳ ಒಟ್ಟು ಸರಾಸರಿ ಆಧಾರದ ಮೇಲೆ ಮೆರಿಟ್ ವೈಸ್ 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು.
• ಆದೇಶ ಜಾರಿಕಾರ, ಸಿಪಾಯಿ ಹುದ್ದೆಗೆ ನಿಗದಿಪಡಿಸಿದ ಶೈಕ್ಷಣಿಕ ಪರೀಕ್ಷೆಗಳ ಅಂಕಗಳ ಒಟ್ಟು ಸರಾಸರಿ ಆಧಾರದ ಮೇಲೆ ಮೆರಿಟ್ ವೈಸ್ ಸಂದರ್ಶನಕ್ಕೆ ಕರೆಯಲಾಗುವುದು.

ಉದ್ಯೋಗ ಮಾಹಿತಿ : ಕೆ.ಎಂ.ಎಫ್ ನೇಮಕಾತಿ 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ಶೀಘ್ರಲಿಪಿಗಾರ ಹುದ್ದೆಗೆ ರೂ. 300, ಆದೇಶ ಜಾರಿಕಾರ ಹುದ್ದೆಗೆ ರೂ. 250, ಸಿಪಾಯಿ ಹುದ್ದೆಗೆ ರೂ. 200
• ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇರುತ್ತದೆ.

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರವರಿ 02, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 03, 2023
ಚಲನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ 07, 2023

Belagavi District Court Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link CLICK HERE

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment