Bengaluru City Civil Court Recruitment 2022 – Apply Online for 133 Stenographer, Typist, Process Server, Peon Posts

Bengaluru City Civil Court Recruitment 2022 : ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಘಟಕದಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bengaluru City Civil Court Recruitment 2022 : Details of Vacancies

ಹುದ್ದೆ : ಶೀಘ್ರಲಿಪಿಗಾರರು ಗ್ರೇಡ್ 3, ಬೆರಳಚ್ಚುಗಾರರು, ಆದೇಶ ಜಾರಿಕಾರರು ಹಾಗೂ ಜವಾನ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 133 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆವೇತನ
ಶೀಘ್ರಲಿಪಿಗಾರ1727650-52650
ಬೆರಳಚ್ಚುಗಾರ2421400-42000
ಆದೇಶ ಜಾರಿಕಾರ519950-37900
ಜವಾನ8717000-28950

ಶೈಕ್ಷಣಿಕ ಅರ್ಹತೆ :

ಶೀಘ್ರಲಿಪಿಗಾರರು ಹುದ್ದೆಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರ್ಯಾಕ್ಟೀಸ್ ಪರೀಕ್ಷೆ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು & ಶೀಘ್ರಲಿಪಿಯಲ್ಲಿ ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರ್ಯಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಬೆರಳಚ್ಚುಗಾರರು ಹುದ್ದೆಗೆ ಪದವಿಪೂರ್ವ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಮೂರು ವರ್ಷಗಳ ಡಿಪ್ಲೊಮಾ ಕಮರ್ಷಿಯಲ್ ಪ್ರ್ಯಾಕ್ಟೀಸ್ ಪರೀಕ್ಷೆ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲಿಷ್ ಬೆರಳಚ್ಚು ಹಿರಿಯ ದರ್ಜೆ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ಡಿಪ್ಲೊಮಾ ಕಮರ್ಷಿಯಲ್ ಪ್ರ್ಯಾಕ್ಟಿಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಆದೇಶ ಜಾರಿಕಾರರು ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ವಾಹನ ಚಾಲನಾ ಪರವಾನಿಗೆ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.
ಜವಾನ ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ಉದ್ಯೋಗ ಮಾಹಿತಿ : ಹಾಸನ ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,

ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಆಯ್ಕೆ ವಿಧಾನ :

ಶೀಘ್ರಲಿಪಿಗಾರ, ಬೆರಳಚ್ಚುಗಾರ ಹುದ್ದೆಗೆ ಶೈಕ್ಷಣಿಕ ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳು ಮತ್ತು ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಒಟ್ಟು ಅಂಕಗಳ ಶೇಕಡಾ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಆದೇಶ ಜಾರಿಕಾರ, ಜವಾನ ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡಾ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬೆಂಗಳೂರು ನಗರ ಸಿವಿಲ್ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :

ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 200
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 100
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 21, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 20, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮೇ 21, 2022

Bengaluru City Civil Court Recruitment 2022 : Important Links

ಅಧಿಸೂಚನೆClick Here
ಅರ್ಜಿ ಸಲ್ಲಿಸಿClick Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment