Bengaluru Rural District Court Recruitment 2024 : ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರರು, ಜವಾನ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Bengaluru Rural District Court Recruitment 2024 : Details of Vacancies
ಹುದ್ದೆ : ಬೆರಳಚ್ಚುಗಾರರು, ಜವಾನ
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 58 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಬೆರಳಚ್ಚುಗಾರರು | 29+1 | 21,400-42,000 |
ಜವಾನ | 28 | 17,000-28,950 |
ಶೈಕ್ಷಣಿಕ ಅರ್ಹತೆ :
ಬೆರಳಚ್ಚುಗಾರರು – ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಪ್ರೌಡದರ್ಜೆ ಬೆರಳಚ್ಚು ಪರೀಕ್ಷೆಗಳಲ್ಲಿ ಅಥವಾ ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಜವಾನರು – ಹತ್ತನೆಯ ತರಗತಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಕನ್ನಡ ಓದುವ ಮತ್ತು ಬರೆಯುವ ಸಾಮರ್ಥ್ಯ ಹೊಂದಿರಬೇಕು.
ಉದ್ಯೋಗ ಮಾಹಿತಿ : ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
ಆಯ್ಕೆ ವಿಧಾನ :
• ಬೆರಳಚ್ಚುಗಾರ ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿ ಪಡೆದ ಒಟ್ಟು ಅಂಕಗಳ ಶೇಕಡಾವಾರು, ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳ ಶೇಕಡಾವಾರು ಮತ್ತು ಸಂದರ್ಶನದಲ್ಲಿ ಪಡೆದ ಅಂಕ ಇವುಗಳ ಮೊತ್ತದ ಆಧಾರದ ಮೇಲೆ ಜ್ಯೇಷ್ಠತೆಯ ಅನುಸಾರ ಆಯ್ಕೆ ಪಟ್ಟಿ ಸಿದ್ಧಪಡಿಸಲಾಗುವುದು.
• ಜವಾನ ಹುದ್ದೆಗೆ 10ನೇ ತರಗತಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2024
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗದ ಅಭ್ಯರ್ಥಿಗಳು – ರೂ. 200
• ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು – ರೂ. 100
• ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ
ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯು.ಪಿ.ಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಫೆಬ್ರುವರಿ 16, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 20, 2024
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಮಾರ್ಚ್ 20, 2024
Bengaluru Rural Court Recruitment 2024 : Important Links
NOTIFICATION (Typist) | CLICK HERE |
NOTIFICATION (Peon) | CLICK HERE |
APPLY ONLINE | CLICK HERE |
Telegram Join Link | Click Here |
WhatsApp Channel Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.