
Bengaluru Rural District Court Recruitment 2026 : ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಗ್ರೇಡ್-3 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Bengaluru Rural District Court Recruitment 2026 : Details of Vacancies
ಹುದ್ದೆ :
ಶೀಘ್ರಲಿಪಿಗಾರರು ಗ್ರೇಡ್-3
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 21 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ :
- ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಮೂರು ವರ್ಷಗಳ ಡಿಪ್ಲೋಮ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಸಾರ್ವಜನಿಕ ಶಿಕ್ಷಣ ಇಲಾಖೆ ನಡೆಸುವ ಕನ್ನಡ ಮತ್ತು ಆಂಗ್ಲ ಭಾಷೆಯ ಹಿರಿಯ ಶ್ರೇಣಿ ಬೆರಳಚ್ಚು ಮತ್ತು ಹಿರಿಯ ಶ್ರೇಣಿ ಶೀಘ್ರಲಿಪಿಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
- ಕಛೇರಿ ಕಾರ್ಯಕಲಾಪಗಳಿಗೆ ಸಂಬಂಧಿಸಿದಂತೆ ಕಂಪ್ಯೂಟರ್ ಬಳಕೆ ಜ್ಞಾನ ಅವಶ್ಯಕವಾಗಿರುತ್ತದೆ.
ವಯೋಮಾನ :
- ಕನಿಷ್ಠ 18 ವರ್ಷ
- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ – ಗರಿಷ್ಠ 43 ವರ್ಷ
- ಎಸ್ಸಿ, ಎಸ್ಟಿ, ಪ್ರ1ರ ಅಭ್ಯರ್ಥಿಗಳಿಗೆ – ಗರಿಷ್ಠ 45 ವರ್ಷ
ಉದ್ಯೋಗ ಮಾಹಿತಿ : ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಆದೇಶ ಜಾರಿಕಾರರು ಹಾಗೂ ಜವಾನ ಹುದ್ದೆಗಳ ನೇಮಕಾತಿ 2026
ವೇತನ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,425 ರಿಂದ ರೂ. 83,700 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ :
ನಿಗದಿಪಡಿಸಲಾದ ವಿದ್ಯಾರ್ಹತೆಯ ಪರೀಕ್ಷೆಗಳಲ್ಲಿನ ಮತ್ತು ಕೌಶಲ ಪರೀಕ್ಷೆಗಳ ಒಟ್ಟು ಅಂಕಗಳ ಶೇಕಡಾವಾರು ಮೊತ್ತದ ಆಧಾರದ ಮೇಲೆ ಮೀಸಲಾತಿಗನುಗುಣವಾಗಿ 1 ಹುದ್ದೆಗೆ 5 ಅಭ್ಯರ್ಥಿಗಳಂತೆ (1:5ರ ಅನುಪಾತದಲ್ಲಿ) ಅತಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು.
ಉದ್ಯೋಗ ಮಾಹಿತಿ : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯಿಂದ 15000 ಶಾಲಾ ಶಿಕ್ಷಕರ ನೇಮಕಾತಿ 2026
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
- ಸಾಮಾನ್ಯ ಅರ್ಹತೆ ಅಭ್ಯರ್ಥಿಗಳು – ರೂ. 200
- ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಅಭ್ಯರ್ಥಿಗಳು – ರೂ. 100
- ಪ.ಜಾತಿ, ಪ.ಪಂ, ಪ್ರವರ್ಗ 1, ಅಂಗವಿಕಲ/ ವಿಕಲಚೇತನ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್, ಯುಪಿಐ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಆಗಸ್ಟ್ 17, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 15, 2026
- ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಸೆಪ್ಟೆಂಬರ್ 15, 2026
Bengaluru Rural District Court Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE ಆಗಸ್ಟ್ 17 ರಿಂದ ಪ್ರಾರಂಭ |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.