ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ನೇಮಕಾತಿ 2024 – Bengaluru Urban Zilla Panchayat Recruitment 2024

Bengaluru Urban Zilla Panchayat Recruitment 2024 : ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bengaluru Urban Zilla Panchayat Recruitment 2024 : Details of Vacancies

ಹುದ್ದೆ : ಜಿಲ್ಲಾ ಎಂ.ಐ.ಎಸ್ ಕೋ-ಆರ್ಡಿನೇಟರ್, ತಾಂತ್ರಿಕ ಸಹಾಯಕರು, ತಾಂತ್ರಿಕ ಸಹಾಯಕರು (ಅರಣ್ಯ), ತಾಂತ್ರಿಕ ಸಹಾಯಕರು (ರೇಷ್ಮೆ)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರು ನಗರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 05 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಜಿಲ್ಲಾ ಎಂ.ಐ.ಎಸ್ ಕೋ-ಆರ್ಡಿನೇಟರ್134,000
ತಾಂತ್ರಿಕ ಸಹಾಯಕರು226,000-28,000
ತಾಂತ್ರಿಕ ಸಹಾಯಕರು (ಅರಣ್ಯ)128,000
ತಾಂತ್ರಿಕ ಸಹಾಯಕರು (ರೇಷ್ಮೆ)128,000

ಶೈಕ್ಷಣಿಕ ಅರ್ಹತೆ :
• ಜಿಲ್ಲಾ ಎಂ.ಐ.ಎಸ್ ಕೋ-ಆರ್ಡಿನೇಟರ್ – ಬಿಇ/ ಬಿ.ಟೆಕ್, ಎಂಸಿಎ (ಕಂಪ್ಯೂಟರ್ ಸೈನ್ಸ್)
• ತಾಂತ್ರಿಕ ಸಹಾಯಕರು – ಬಿಇ ಅಥವಾ ಬಿ.ಟೆಕ್ (ಸಿವಿಲ್ ಇಂಜಿನಿಯರಿಂಗ್), ಡಿಪ್ಲೊಮಾ ಇನ್ ಸಿವಿಲ್ ಜೊತೆಗೆ ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
• ತಾಂತ್ರಿಕ ಸಹಾಯಕರು (ಅರಣ್ಯ) – ಬಿ.ಎಸ್ಸಿ ಫಾರೆಸ್ಟ್ರಿ.
• ತಾಂತ್ರಿಕ ಸಹಾಯಕರು (ರೇಷ್ಮೆ) – ಬಿ.ಎಸ್ಸಿ ಸೆರಿಕಲ್ಚರ್.

ಉದ್ಯೋಗ ಮಾಹಿತಿ : ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ನೇಮಕಾತಿ 2024

ವಯೋಮಾನ : ಅಭ್ಯರ್ಥಿಗಳು ಕನಿಷ್ಠ 21 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ವಯೋಮಾನ ಮೀರಿರಬಾರದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಈ ಹುದ್ದೆಗೆ ಆಫ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲಿಕೇಷನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ಡೌನ್ಲೋಡ್ ಮಾಡಿಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ) ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಬನಶಂಕರಿ ದೇವಸ್ಥಾನದ ಹತ್ತಿರ, ಎಸ್. ಕರಿಯಪ್ಪ ರಸ್ತೆ, ಬನಶಂಕರಿ, ಬೆಂಗಳೂರು – 560070

ನಿಗದಿತ ಅರ್ಜಿ ಶುಲ್ಕದ ವಿವರ : ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜೂನ್ 12, 2024
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಜುಲೈ 02, 2024

Bengaluru Urban ZP Recruitment 2024 : Important Links

NOTIFICATIONCLICK HERE
APPLICATION FORM CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment