BESCOM Recruitment 2021 : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
BESCOM Recruitment 2021 : Details of Vacancies
ಹುದ್ದೆ : ಗ್ರ್ಯಾಜುಯೆಟ್ ಅಪ್ರೆಂಟಿಸ್, ಟೆಕ್ನೀಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 400 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಗ್ರ್ಯಾಜುಯೆಟ್ ಅಪ್ರೆಂಟಿಸ್ | 325 |
ಟೆಕ್ನೀಷಿಯನ್ (ಡಿಪ್ಲೋಮಾ) ಅಪ್ರೆಂಟಿಸ್ | 75 |
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿಇ/ ಬಿಟೆಕ್, ಡಿಪ್ಲೋಮಾ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಅರ್ಹತೆ : ಜುಲೈ 2018 ರಿಂದ 2020 ರವರೆಗೆ ಡಿಪ್ಲೋಮಾ, ಬಿಇ/ ಬಿಟೆಕ್ ಪದವಿಯಲ್ಲಿ ಪಾಸಾದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದು.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 5,000 ರಿಂದ ರೂ. 7,000 ವರೆಗೂ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಹಾಗೂ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : District Child Protection Unit Recruitment 2021
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 15, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 05, 2021
ಆಯ್ಕೆ ಪಟ್ಟಿಯನ್ನು ಪ್ರಕಟಿಸುವ ದಿನಾಂಕ : ಆಗಸ್ಟ್ 10, 2021
ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲೆಗಳ ಪರಿಶೀಲನೆ ದಿನಾಂಕ : ಆಗಸ್ಟ್ 16, 2021 ರಿಂದ ಆಗಸ್ಟ್ 18, 2021ರವರೆಗೆ
BESCOM Recruitment 2021 : Important Links
ಅಧಿಸೂಚನೆ : Click Here
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.