BESCOM Recruitment 2021 : ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ ಅಗತ್ಯವಿರುವ ಕಂಪನಿ ಸೆಕ್ರೆಟರಿ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
BESCOM Recruitment 2021 : Details of Vacancies
ಹುದ್ದೆ : ಕಂಪನಿ ಸೆಕ್ರೆಟರಿ
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 01 ಹುದ್ದೆಯ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಹುದ್ದೆಗೆ ಸಂಬಂಧಿಸಿದ ಕ್ಷೇತ್ರದಲ್ಲಿ ಕಾರ್ಯಾನುಭವ ಅಗತ್ಯ.
ವಯೋಮಾನ : ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 61,420 ರಿಂದ ರೂ. 1,03,290 ವರೆಗೂ ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ : ಅಭ್ಯರ್ಥಿಗಳು ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕ, ಅನುಭವ ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.
ಉದ್ಯೋಗ ಮಾಹಿತಿ : ವಾಕರಸಾ ಸಂಸ್ಥೆ ನೌಕರರ ಸಹಕಾರಿ ಪತ್ತಿನ ಸಂಘದಲ್ಲಿ ನೇಮಕಾತಿ
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಸ್ವ ವಿವರ, ವಿದ್ಯಾರ್ಹತೆ ದಾಖಲೆ, ಅನುಭವ ಹಾಗೂ ಇತರ ದಾಖಲೆಗಳನ್ನು ಕಛೇರಿಯ ವಿಳಾಸಕ್ಕೆ ಅಂಚೆ ಮೂಲಕ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : General Manager (A&HR),
Bescom Corporate Office, K.R Circle,
Bangaluru ~ 560001
ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 19, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 05, 2021
BESCOM Recruitment 2021 : Important Links
ಅಧಿಸೂಚನೆ : Click Here
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.