Bharat Cooperative Bank Recruitment 2023 – Apply for 22 Accountant, SDA, Attender and Various Posts

Bharat Cooperative Bank Recruitment 2023 – BCB Bank Recruitment 2023 : ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ, ಜಯನಗರ, ಬೆಂಗಳೂರು ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bharat Cooperative Bank Recruitment 2023 : Details of Vacancies

ಹುದ್ದೆ : ಮುಖ್ಯ ಕಾರ್ಯನಿರ್ವಾಹಣಾಧಿಕಾರಿ, ಹಿರಿಯ ವ್ಯವಸ್ಥಾಪಕರು, ಕಂಪ್ಯೂಟರ್ ಮ್ಯಾನೇಜರ್, ವ್ಯವಸ್ಥಾಪಕರು, ಅಕೌಂಟೆಂಟ್, ಅಸಿಸ್ಟೆಂಟ್ ಅಕೌಂಟೆಂಟ್, ದ್ವಿತೀಯ ದರ್ಜೆ ಸಹಾಯಕರು, ಅಟೆಂಡರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 22 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಮುಖ್ಯ ಕಾರ್ಯನಿರ್ವಾಹಣಾಧಿಕಾರಿ140050-56550
ಹಿರಿಯ ವ್ಯವಸ್ಥಾಪಕರು136300-53850
ಕಂಪ್ಯೂಟರ್ ಮ್ಯಾನೇಜರ್128100-50100
ವ್ಯವಸ್ಥಾಪಕರು328100-50100
ಅಕೌಂಟೆಂಟ್224000-45300
ಅಸಿಸ್ಟೆಂಟ್ ಅಕೌಂಟೆಂಟ್221600-40050
ದ್ವಿತೀಯ ದರ್ಜೆ ಸಹಾಯಕರು217650-32000
ಅಟೆಂಡರ್1012500-24000

ಶೈಕ್ಷಣಿಕ ಅರ್ಹತೆ :

• ಮುಖ್ಯ ಕಾರ್ಯನಿರ್ವಹಣಾಧಿಕಾರಿ – ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಹೊಂದಿರಬೇಕು.
ಅನುಭವ – ಬ್ಯಾಂಕಿಂಗ್ ವಲಯದಲ್ಲಿ ಮಧ್ಯಮ/ ಹಿರಿಯ ಶ್ರೇಣಿಯಲ್ಲಿ ಕನಿಷ್ಠ 8 ವರ್ಷಗಳ ಸೇವಾ ಅನುಭವ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇತ್ತೀಚಿನ ಮಾಹಿತಿ ಮತ್ತು ತಂತ್ರಜ್ಞಾನದ ಅನುಭವ ಹೊಂದಿರಬೇಕು.

• ಹಿರಿಯ ವ್ಯವಸ್ಥಾಪಕರು – ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ಅನುಭವ – ಬ್ಯಾಂಕಿಂಗ್ ವಲಯದಲ್ಲಿ ಮಧ್ಯಮ/ ಹಿರಿಯ ಶ್ರೇಣಿಯಲ್ಲಿ ಕನಿಷ್ಠ 5 ವರ್ಷಗಳ ಸೇವಾ ಅನುಭವ ಹಾಗೂ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಇತ್ತೀಚಿನ ಮಾಹಿತಿ ಮತ್ತು ತಂತ್ರಜ್ಞಾನದ ಅನುಭವ ಹೊಂದಿರಬೇಕು.

• ಕಂಪ್ಯೂಟರ್ ಮ್ಯಾನೇಜರ್ – ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಗಣಕ ವಿಜ್ಞಾನದಲ್ಲಿ ಬಿ.ಇ ಪದವಿ ಅಥವಾ ಕಂಪ್ಯೂಟರ್ ಅಪ್ಲಿಕೇಷನ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು ಮತ್ತು ಬ್ಯಾಂಕಿಂಗ್ ವಲಯದ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದಲ್ಲಿ 5 ವರ್ಷಗಳು ಕೆಲಸ ಮಾಡಿರುವ ಅನುಭವ ಹೊಂದಿರಬೇಕು.

• ವ್ಯವಸ್ಥಾಪಕರು – ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು ಮತ್ತು ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.
ಅನುಭವ – ಬ್ಯಾಂಕಿಂಗ್ ವಲಯದಲ್ಲಿ ಕನಿಷ್ಠ 5 ವರ್ಷಗಳ ಸೇವಾ ಅನುಭವ ಇರಬೇಕು.

• ಅಕೌಂಟೆಂಟ್, ಅಸಿಸ್ಟೆಂಟ್ ಅಕೌಂಟೆಂಟ್ – ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ವಾಣಿಜ್ಯ/ಸಹಕಾರ/ಮ್ಯಾನೇಜ್ಮೆಂಟ್ ವಿಷಯಗಳಲ್ಲಿ ಪದವಿ ಪಡೆದಿರಬೇಕು ಹಾಗೂ ಟ್ಯಾಲಿ ಕೋರ್ಸ್ ತೇರ್ಗಡೆಯಾದ ಪ್ರಮಾಣ ಪತ್ರದ ಜೊತೆಗೆ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಷನ್ ಜ್ಞಾನ ಹೊಂದಿರಬೇಕು.
ಅನುಭವ – ಬ್ಯಾಂಕಿಂಗ್ ವಲಯದಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ ನೀಡಲಾಗುವುದು.

• ದ್ವಿತೀಯ ದರ್ಜೆ ಸಹಾಯಕರು – ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿರಬೇಕು ಮತ್ತು ಕಂಪ್ಯೂಟರಿನಲ್ಲಿ ಸೂಕ್ತ ಅರಿವಿರಬೇಕು.

• ಅಟೆಂಡರ್ – ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರಬೇಕು ಮತ್ತು ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 35 ವರ್ಷ
• ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ – ಗರಿಷ್ಠ 38 ವರ್ಷ
• ಪ.ಜಾತಿ, ಪ.ಪಂ, ಇತರೆ ಹಿಂದುಳಿದ ವರ್ಗ 1ರ ಅಭ್ಯರ್ಥಿಗಳಿಗೆ – ಗರಿಷ್ಠ 40 ವರ್ಷ

ಆಯ್ಕೆ ವಿಧಾನ : ಅಟೆಂಡರ್ ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅವರು ಪಡೆದ ಅಂಕದ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನ ನಡೆಸಿ ಹುದ್ದೆಗೆ ನೇಮಕ ಮಾಡಲಾಗುವುದು ಮತ್ತು ಉಳಿದ ಹುದ್ದೆಗೆ ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:5ರ ಅನುಪಾತದಲ್ಲಿ ಸಂದರ್ಶನ ನಡೆಸಿ ಹುದ್ದೆಗೆ ನೇಮಕ ಮಾಡಲಾಗುವುದು.

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿಯಲ್ಲಿ ನೇರ ನೇಮಕಾತಿ 2023

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಬ್ಯಾಂಕಿನ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Application Form Link ಮೇಲೆ ಕ್ಲಿಕ್ ಮಾಡಿ Application ಡೌನ್ಲೋಡ್ ಮಾಡಿಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ಅಂಚೆ ಮೂಲಕ ಅಥವಾ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಮುಖ್ಯ ಕಾರ್ಯನಿರ್ವಹಣಾಧಿಕಾರಿ, ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿ., ನಂ. 30, 15ನೇ ಕ್ರಾಸ್, 3ನೇ ಬ್ಲಾಕ್, ಜಯನಗರ, ಬೆಂಗಳೂರು – 560 011

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅರ್ಹ ಅಭ್ಯರ್ಥಿಗಳು – ರೂ. 1,000
• ಪ.ಜಾತಿ, ಪ.ಪಂ., ಹಿಂದುಳಿದ ವರ್ಗ – 01ರ ಅಭ್ಯರ್ಥಿಗಳು – ರೂ. 500

ಶುಲ್ಕ ಪಾವತಿಸುವ ವಿಧಾನ : ಅರ್ಜಿ ಶುಲ್ಕವನ್ನು ದಿ ಭಾರತ್ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತ ಇವರ ಹೆಸರಿಗೆ ಡಿಡಿ/ಪೇ ಆರ್ಡರ್/ಪೋಸ್ಟಲ್ ಆರ್ಡರ್ ಮೂಲಕ ಪಾವತಿಸಬೇಕು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜನವರಿ 11, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 27, 2023

Bharat Cooperative Bank Recruitment 2023 : Important Links

NOTIFICATIONCLICK HERE
APPLICATION FORM CLICK HERE
Telegram Join Link Click Here

ಸೂಚನೆಗಳು : ದಿನಾಂಕ 25/05/2022ರ ನೇಮಕಾತಿ ಪ್ರಕಟಣೆಯನುಸಾರ ವಿವಿಧ ಹುದ್ದೆಗಳಿಗೆ ಈಗಾಗಲೇ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment