Bidar District Court Recruitment 2022 – Apply Online for 32 Process Server, Peon Posts

Bidar District Court Recruitment 2022 : ಬೀದರ್ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Bidar District Court Recruitment 2022 : Details of Vacancies

ಹುದ್ದೆ : ಬೆರಳಚ್ಚು ನಕಲುಗಾರರು, ಆದೇಶ ಜಾರಿಕಾರರು ಹಾಗೂ ಜವಾನರು

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೀದರ್ ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 32 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆ ಹುದ್ದೆಗಳ ಸಂಖ್ಯೆ ವೇತನ
ಬೆರಳಚ್ಚು ನಕಲುಗಾರು321400-42000
ಆದೇಶ ಜಾರಿಕಾರರು1419950-37900
ಜವಾನರು1517000-28950

ಶೈಕ್ಷಣಿಕ ಅರ್ಹತೆ :

ಬೆರಳಚ್ಚು ನಕಲುಗಾರರು ಹುದ್ದೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಕನ್ನಡ ಮತ್ತು ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಕಿರಿಯ ಶ್ರೇಣಿ ಬೆರಳಚ್ಚು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಆದೇಶ ಜಾರಿಕಾರರು ಹುದ್ದೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.ವಾಹನ ಚಾಲನಾ ಪರವಾನಿಗೆ ಇರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ಜವಾನರು ಹುದ್ದೆಗೆ 10ನೇ ತರಗತಿಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.

ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ,
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

ಆಯ್ಕೆ ವಿಧಾನ :

ಬೆರಳಚ್ಚು ನಕಲುಗಾರರು ಹುದ್ದೆಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು 15 ನಿಮಿಷಗಳ ಉಕ್ತಲೇಖನಲ್ಲಿ ಕೊಡುವ ವಿಷಯವನ್ನು ಬೆರಳಚ್ಚು ಯಂತ್ರ/ ಕಂಪ್ಯೂಟರ್ ಮುಖಾಂತರ ಬೆರಳಚ್ಚು ಮಾಡುವ ಸಾಮರ್ಥ್ಯ/ ಅರ್ಹತಾ ಪರೀಕ್ಷೆಯಲ್ಲಿ ಗಳಿಸುವ ಅಂಕಗಳು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಆದೇಶ ಜಾರಿಕಾರ, ಜವಾನ ಹುದ್ದೆಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ತುಮಕೂರು ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022

ಬೀದರ್ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬೀದರ್ ಜಿಲ್ಲಾ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು

ನಿಗದಿತ ಅರ್ಜಿ ಶುಲ್ಕದ ವಿವರ :
• ಸಾಮಾನ್ಯ ವರ್ಗ, ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು ರೂ. 200
• ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳು ರೂ. 100

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್.ಬಿ.ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜೂನ್ 13, 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜುಲೈ 12, 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : ಜುಲೈ 14, 2022

Bidar District Court Recruitment 2022 : Important Links

Notification Click Here
Apply Online Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment