BMRCL Recruitment 2023 – Apply Online for 96 Station Controller/ Train Operator Posts

BMRCL Recruitment 2023 – Namma Metro Recruitment 2023 : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದ ಕಾರ್ಯಾಚರಣೆ ಮತ್ತು ನಿರ್ವಹಣೆ ವಿಭಾಗದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಮಾಜಿ ಸೈನಿಕ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಅರ್ಜಿ ಶುಲ್ಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

BMRCL Recruitment 2023 : Details of Vacancies

ಹುದ್ದೆ : ಸ್ಟೇಷನ್ ಕಂಟ್ರೋಲರ್/ ಟ್ರೈನ್ ಆಪರೇಟರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 96 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಮೆಟ್ರಿಕ್ಯುಲೇಷನ್ ಜೊತೆಗೆ ಈ ಕೆಳಗಿನ ಯಾವುದೇ ಬ್ರಾಂಚ್ ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ / ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ / ಟೆಲಿಕಮ್ಯುನಿಕೇಶನ್ಸ್ / ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ / ಎಲೆಕ್ಟ್ರಿಕಲ್ ಪವರ್ ಸಿಸ್ಟಮ್ಸ್ / ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್ / ಮೆಕ್ಯಾನಿಕಲ್ ಇಂಜಿನಿಯರಿಂಗ್ ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ ಸಶಸ್ತ್ರ ಪಡೆಗಳು ನೀಡಿದ ಕ್ಲಾಸ್-1 ಟ್ರೇಡ್ ನಲ್ಲಿ ತತ್ಸಮಾನ ಅರ್ಹತೆ ಹೊಂದಿರಬೇಕು.

ವೇತನ : ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 35,000 ರಿಂದ ರೂ. 82,660 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.

ಉದ್ಯೋಗ ಮಾಹಿತಿ : ಮೈಸೂರು ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2023

ವಯೋಮಾನ : ದಿನಾಂಕ 16/05/2023 ರಂದು ಅಭ್ಯರ್ಥಿಯ ವಯಸ್ಸು ಹುದ್ದೆಗೆ ನಿಗದಿಪಡಿಸಿದ ಗರಿಷ್ಠ 45 ವರ್ಷ ವಯಸ್ಸನ್ನು ಮೀರಿರಬಾರದು.

ಆಯ್ಕೆ ವಿಧಾನ : ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆಯನ್ನು ಕಟ್ಟುನಿಟ್ಟಾಗಿ ಮಾಡಲಾಗುವುದು. ಆಯ್ಕೆ ಮಾಡಿದ ಅಭ್ಯರ್ಥಿಗಳನ್ನು ಮೂಲ ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಫಿಟ್‌ನೆಸ್ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಅಪ್ಲಿಕೇಷನ್ ಪ್ರಿಂಟ್ ತೆಗೆದುಕೊಳ್ಳಿ.
ಹಂತ 3 : ಸಹಿ ಮಾಡಿರುವ ಅಪ್ಲಿಕೇಷನ್ ಗೆ ಅಗತ್ಯವಿರುವ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಡೆ ನೀಡಲಾಗಿರುವ ಕಛೇರಿಯ ವಿಳಾಸಕ್ಕೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಜನರಲ್ ಮ್ಯಾನೇಜರ್ (ಹೆಚ್.ಆರ್), ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ,
3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆ.ಹೆಚ್. ರಸ್ತೆ, ಶಾಂತಿನಗರ, ಬೆಂಗಳೂರು – 560027

ನಿಗದಿತ ಪರೀಕ್ಷಾ ಶುಲ್ಕದ ವಿವರ : ಇದು ಮಾಜಿ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ವಿಶೇಷ ನೇಮಕಾತಿ ಆಗಿರುವುದರಿಂದ ಯಾವುದೇ ಪರೀಕ್ಷಾ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಮೇ 16, 2023
ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮೇ 31, 2023 ಜೂನ್ 07, 2023
ಭರ್ತಿ ಮಾಡಿದ ಅರ್ಜಿಯನ್ನು ಕಛೇರಿಗೆ ಸಲ್ಲಿಸಲು ಕೊನೆಯ ದಿನಾಂಕ : ಜೂನ್ 07, 2023 ಜೂನ್ 13, 2023

BMRCL Recruitment 2023 : Important Links

NOTIFICATIONCLICK HERE
APPLY ONLINE CLICK HERE
Telegram Join Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment