BPNL Recruitment 2021 : 3216 ಮ್ಯಾನೇಜರ್, ಅಸಿಸ್ಟೆಂಟ್ ಹುದ್ದೆಗಳ ಭರ್ತಿ

BPNL Recruitment 2021 : ಭಾರತೀಯ ಪಶುಪಾಲನಾ ನಿಗಮದಲ್ಲಿ ಖಾಲಿಯಿರುವ ಮ್ಯಾನೇಜರ್ ಹಾಗೂ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

BPNL Recruitment 2021 : Details of Vacancies

ಹುದ್ದೆ :
• ಸೇಲ್ಸ್ ಮ್ಯಾನೇಜರ್
• ಸೇಲ್ಸ್ ಡೆವಲಪ್ಮೆಂಟ್ ಆಫೀಸರ್
• ಸೇಲ್ಸ್ ಅಸಿಸ್ಟೆಂಟ್

ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 3216 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಸೇಲ್ಸ್ ಮ್ಯಾನೇಜರ್64
ಸೇಲ್ಸ್ ಡೆವಲಪ್ಮೆಂಟ್ ಆಫೀಸರ್485
ಸೇಲ್ಸ್ ಅಸಿಸ್ಟೆಂಟ್2667

ಶೈಕ್ಷಣಿಕ ಅರ್ಹತೆ :
ಸೇಲ್ಸ್ ಮ್ಯಾನೇಜರ್ ಹುದ್ದೆಗೆ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಸೇಲ್ಸ್ ಡೆವಲಪ್ಮೆಂಟ್ ಆಫೀಸರ್ ಹುದ್ದೆಗೆ ದ್ವಿತೀಯ ಪಿಯುಸಿ ಪಾಸಾಗಿರಬೇಕು.
ಸೇಲ್ಸ್ ಅಸಿಸ್ಟೆಂಟ್ ಹುದ್ದೆಗೆ ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು

ವೇತನ :
• ಸೇಲ್ಸ್ ಮ್ಯಾನೇಜರ್ – ಮಾಸಿಕ ರೂ. 21,000
• ಸೇಲ್ಸ್ ಡೆವಲಪ್ಮೆಂಟ್ ಆಫೀಸರ್ – ಮಾಸಿಕ ರೂ. 18,000
• ಸೇಲ್ಸ್ ಅಸಿಸ್ಟೆಂಟ್ – ಮಾಸಿಕ ರೂ. 15,000

ವಯೋಮಾನ :
ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ಅನುಗುಣವಾಗಿ ನಿಗದಿತ ವಯೋಮಾನ ಹೊಂದಿರಬೇಕು
• ಸೇಲ್ಸ್ ಮ್ಯಾನೇಜರ್ ಹುದ್ದೆಗೆ ಕನಿಷ್ಠ 25 ವರ್ಷ ಹಾಗೂ ಗರಿಷ್ಠ 45 ವರ್ಷ
• ಸೇಲ್ಸ್ ಡೆವಲಪ್ಮೆಂಟ್ ಆಫೀಸರ್, ಸೇಲ್ಸ್ ಅಸಿಸ್ಟೆಂಟ್ ಹುದ್ದೆಗೆ ಕನಿಷ್ಠ 21 ವರ್ಷ ಹಾಗೂ ಗರಿಷ್ಠ 40 ವರ್ಷ.

ಉದ್ಯೋಗ ಮಾಹಿತಿ : ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿ ಕಛೇರಿಯಲ್ಲಿ ಉದ್ಯೋಗ

BPNL Recruitment 2021 : ಭಾರತೀಯ ಪಶುಪಾಲನಾ ನಿಗಮದಲ್ಲಿ ಖಾಲಿಯಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕವೇ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಭಾರತೀಯ ಪಶುಪಾಲನಾ ನಿಗಮದ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ, ಆನ್‌ಲೈನ್‌ ಅರ್ಜಿಯಲ್ಲಿ ಹುದ್ದೆಗೆ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ನಂತರ ನಿಗದಿತ ಅರ್ಜಿ ಶುಲ್ಕ ಪಾವತಿಸಿ ಅರ್ಜಿಯನ್ನು ಸಲ್ಲಿಸಬೇಕು.

ನಿಗದಿತ ಅರ್ಜಿ ಶುಲ್ಕದ ವಿವರ :
ಅಭ್ಯರ್ಥಿಗಳು ಆಯಾ ಹುದ್ದೆಗಳಿಗೆ ನಿಗದಿಪಡಿಸಿದ ಶುಲ್ಕ ಪಾವತಿಸಿ ಅರ್ಜಿ ಸಲ್ಲಿಸಬೇಕು

ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ನಿಗದಿತ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಫೆಬ್ರುವರಿ 02, 2021
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಫೆಬ್ರುವರಿ 15, 2021

ಅಧಿಸೂಚನೆ : Click Here
ಅರ್ಜಿ ಸಲ್ಲಿಸಿ : Click Here

ಕೊನೆಯ ಪದಗಳು :
ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.