BSF Recruitment 2023 : ಗಡಿ ಭದ್ರತಾ ಪಡೆಯಲ್ಲಿ ಅಗತ್ಯವಿರುವ ಹೆಡ್ ಕಾನ್ಸ್ಟೇಬಲ್ (ರೇಡಿಯೋ ಆಪರೇಟರ್, ರೇಡಿಯೋ ಮೆಕ್ಯಾನಿಕ್) ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವೇತನ, ಆಯ್ಕೆ ವಿಧಾನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
BSF Recruitment 2023 : Details of Vacancies
ಹುದ್ದೆ : ಹೆಡ್ ಕಾನ್ಸ್ಟೇಬಲ್ (ರೇಡಿಯೋ ಆಪರೇಟರ್, ರೇಡಿಯೋ ಮೆಕ್ಯಾನಿಕ್)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 247 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ |
ಹೆಡ್ ಕಾನ್ಸ್ಟೇಬಲ್ (ರೇಡಿಯೋ ಆಪರೇಟರ್) | 217 |
ಹೆಡ್ ಕಾನ್ಸ್ಟೇಬಲ್ (ರೇಡಿಯೋ ಮೆಕ್ಯಾನಿಕ್) | 30 |
ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ವಿಷಯದಲ್ಲಿ ಶೇಕಡಾ 60% ಅಂಕಗಳೊಂದಿಗೆ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2023
ವೇತನ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 25,500 ರಿಂದ ರೂ. 81,100 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ವಯೋಮಾನ : ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
• ಸಾಮಾನ್ಯ ಅಭ್ಯರ್ಥಿಗಳಿಗೆ – ಗರಿಷ್ಠ 25 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – ಗರಿಷ್ಠ 28 ವರ್ಷ
• ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ – ಗರಿಷ್ಠ 30 ವರ್ಷ
ಆಯ್ಕೆ ವಿಧಾನ : ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ದೇಹದಾರ್ಢ್ಯತೆ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 2 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ನಿಗದಿತ ಅರ್ಜಿ ಶುಲ್ಕದ ವಿವರ :
• ಎಸ್ಸಿ, ಎಸ್ಟಿ, ಮಹಿಳಾ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇಲ್ಲ.
• ಉಳಿದ ಅಭ್ಯರ್ಥಿಗಳು ರೂ. 100 ಅರ್ಜಿ ಶುಲ್ಕ ಪಾವತಿಸಬೇಕು.
ಶುಲ್ಕ ಪಾವತಿಸುವ ವಿಧಾನ : ಶುಲ್ಕವನ್ನು ಆನ್ಲೈನ್ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಏಪ್ರಿಲ್ 22, 2023
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 12, 2023
ಲಿಖಿತ ಪರೀಕ್ಷೆ ದಿನಾಂಕ : ಜೂನ್ 04, 2023
BSF Recruitment 2023 : Important Links
NOTIFICATION | CLICK HERE |
APPLY ONLINE | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.