
Canara Bank Apprentice Recruitment 2026 : ಕೆನರಾ ಬ್ಯಾಂಕ್ ಇದರಲ್ಲಿ ಅಗತ್ಯವಿರುವ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಹುದ್ದೆಗಳ ಸಂಖ್ಯೆ, ವೇತನ, ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Canara Bank Apprentice Recruitment 2026 : Details of Vacancies
ಹುದ್ದೆ :
ಗ್ರಾಜುಯೇಟ್ ಅಪ್ರೆಂಟಿಸ್
ಕರ್ತವ್ಯ ಸ್ಥಳ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಕೆಲಸ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ :
ಒಟ್ಟು 3500 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅದರಲ್ಲಿ ಕರ್ನಾಟಕದಲ್ಲಿ ಒಟ್ಟು 581 ಹುದ್ದೆಗಳು ಖಾಲಿ ಇದೆ.
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಯಾವುದೇ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು.
ಉದ್ಯೋಗ ಮಾಹಿತಿ : ಭಾರತೀಯ ರೈಲ್ವೆಯಲ್ಲಿ ಪ್ಯಾರಾ ಮೆಡಿಕಲ್ ಹುದ್ದೆಗಳ ನೇಮಕಾತಿ 2026
ವಯೋಮಾನ (ದಿನಾಂಕ 01/09/2026ಕ್ಕೆ) :
- ಕನಿಷ್ಠ 20 ವರ್ಷ ಪೂರೈಸಿರಬೇಕು
- ಗರಿಷ್ಠ 28 ವರ್ಷ ಮೀರಿರಬಾರದು
ವಯೋಮಿತಿ ಸಡಿಲಿಕೆ :
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
- ಒಬಿಸಿ (ಎನ್.ಸಿ.ಎಲ್) ಅಭ್ಯರ್ಥಿಗಳಿಗೆ – 3 ವರ್ಷ
- ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ
ಆಯ್ಕೆ ವಿಧಾನ :
- ಮೆರಿಟ್ ಲಿಸ್ಟ್
- ಸ್ಥಳೀಯ ಭಾಷಾ ಪ್ರಾವೀಣ್ಯತೆ ಪರೀಕ್ಷೆ (10ನೇ ತರಗತಿ ಅಥವಾ 12ನೇ ತರಗತಿಯಲ್ಲಿ ನಿರ್ದಿಷ್ಟಪಡಿಸಿದ ಸ್ಥಳೀಯ ಭಾಷೆಯನ್ನು ಅಧ್ಯಯನ ಮಾಡಿದ ಅಭ್ಯರ್ಥಿಗಳು ಭಾಷಾ ಪ್ರಾವೀಣ್ಯತೆ ಪರೀಕ್ಷೆಯಿಂದ ವಿನಾಯಿತಿ ಪಡೆಯುತ್ತಾರೆ)
- ದಾಖಲೆಗಳ ಪರಿಶೀಲನೆ
ಸ್ಟೈಫಂಡ್ :
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 16,650 ಸ್ಟೈಫಂಡ್ ನೀಡಲಾಗುತ್ತದೆ.
ಅರ್ಜಿ ಸಲ್ಲಿಕೆಯ ವಿಧಾನ :
ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.
ಹಂತ 1 : ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
ಅರ್ಜಿ ಶುಲ್ಕ :
- ಪ.ಜಾತಿ, ಪ.ಪಂಗಡ, ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು – ಅರ್ಜಿ ಶುಲ್ಕ ಇಲ್ಲ
- ಉಳಿದ ಅಭ್ಯರ್ಥಿಗಳು – ರೂ. 500
ಶುಲ್ಕ ಪಾವತಿಸುವ ವಿಧಾನ :
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಅಕ್ಟೋಬರ್ 01, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಅಕ್ಟೋಬರ್ 17, 2026
Canara Bank Apprentice Recruitment 2026 : Important Links
| NOTIFICATION | CLICK HERE |
| APPLY ONLINE | CLICK HERE |
| Telegram Join Link | Click Here |
| WhatsApp Group Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.