Canara Bank Recruitment 2021 : 11 ಶಾಖೆಗಳಲ್ಲಿ ಖಾಲಿಯಿರುವ ಜ್ಯೂವೆಲ್ ಅಪ್ಫ್ರೈಸರ್ ಹುದ್ದೆಗಳ ಭರ್ತಿ

Canara Bank Recruitment 2021 : ಕೆನರಾ ಬ್ಯಾಂಕಿನಲ್ಲಿ ಖಾಲಿಯಿರುವ ಜ್ಯೂವೆಲ್ ಅಪ್ಫ್ರೈಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Canara Bank Recruitment 2021 : Details of Vacancies

ಹುದ್ದೆ : ಜ್ಯೂವೆಲ್ ಅಪ್ಫ್ರೈಸರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಳಗಾವಿ ಜಿಲ್ಲೆಯಲ್ಲಿ ಕೆಲಸ ನಿರ್ವಹಿಸಬೇಕು

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 11 ಶಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಕನಿಷ್ಠ 10ನೇ ತರಗತಿ ಉತ್ತೀರ್ಣರಾಗಿರಬೇಕು

ವಯೋಮಾನ : ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಕನಿಷ್ಠ 30 ವರ್ಷ ಹಾಗೂ ಗರಿಷ್ಠ 60 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಆಯ್ಕೆ ವಿಧಾನ : ಜ್ಯೂವೆಲ್ ಅಪ್ಫ್ರೈಸರ್ ಹುದ್ದೆಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಮೂರು ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುವುದು.

ಅನುಭವ : ಜ್ಯೂವೆಲ್ ಅಪ್ಫ್ರೈಸರ್ ಹುದ್ದೆಗೆ ಚಿನ್ನಾಭರಣಗಳ ಮೌಲ್ಯಮಾಪನ/ ನಿರ್ವಹಣೆಯಲ್ಲಿ ಕಡ್ಡಾಯವಾಗಿ ಐದು ವರ್ಷಗಳ ಪ್ರಾಯೋಗಿಕ ಅನುಭವ ಹೊಂದಿರಬೇಕು. ಅನುಭವ ಪ್ರಮಾಣ ಪತ್ರ, ಜ್ಯೂವೆಲ್ ಅಪ್ಫ್ರೈಸರ್ ಅಸೋಸಿಯೇಷನ್ ನೀಡಿದ ಸರ್ಟಿಫಿಕೇಟ್ ಇತ್ಯಾದಿಗಳನ್ನು ಸಲ್ಲಿಸಬೇಕಾಗುತ್ತದೆ.

ಜ್ಯೂವೆಲ್ ಅಪ್ಫ್ರೈಸರ್ ಬೇಕಾಗಿರುವ ಶಾಖೆಗಳ ವಿವರ ಈ ಕೆಳಗಿನಂತಿದೆ

Canara Bank Recruitment 2021 : 11 ಶಾಖೆಗಳಲ್ಲಿ ಖಾಲಿಯಿರುವ ಜ್ಯೂವೆಲ್ ಅಪ್ಫ್ರೈಸರ್ ಹುದ್ದೆಗಳ ಭರ್ತಿ

ಉದ್ಯೋಗ ಮಾಹಿತಿ : ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘ ನಿಯಮಿತ ನೇಮಕಾತಿ 2021

ಕೆನರಾ ಬ್ಯಾಂಕಿನಲ್ಲಿ ಖಾಲಿಯಿರುವ ಜ್ಯೂವೆಲ್ ಅಪ್ಫ್ರೈಸರ್ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಕಛೇರಿಗೆ ಖುದ್ದಾಗಿ ಹಾಜರಾಗಿ ಅರ್ಜಿಯನ್ನು ಸಲ್ಲಿಸಬೇಕು.
• ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆ ಖಾಲಿಯಿರುವ ಕೆನರಾ ಬ್ಯಾಂಕಿನ ಶಾಖೆಗಳಿಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಪಡೆದು, ನಂತರ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಖುದ್ದಾಗಿ ಹಾಜರಾಗಿ ಸಲ್ಲಿಸಬೇಕು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಏಪ್ರಿಲ್ 19, 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಏಪ್ರಿಲ್ 30, 2021

Canara Bank Recruitment 2021 : Important Links

ಅಧಿಸೂಚನೆ : Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.