Cantonment Board Belgaum Recruitment 2022 : ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ ಇದರಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.
Cantonment Board Belgaum Recruitment 2022 : Details of Vacancies
ಹುದ್ದೆ : ಅಸಿಸ್ಟೆಂಟ್ ಸ್ಯಾನಿಟರಿ ಇನ್ಸ್‌ಪೆಕ್ಟರ್, ಮಾಲಿ, ಚೌಕಿದಾರ್, ಸಫಾಯಿವಾಲಾ, ಕಾವಲುಗಾರ, ಮಸ್ದೂರ್ (ವಡ್ಡರ್ ಕೂಲಿ)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಬೆಳಗಾವಿಯಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 16 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ | ಹುದ್ದೆಗಳ ಸಂಖ್ಯೆ | ವೇತನ |
ಅಸಿಸ್ಟೆಂಟ್ ಸ್ಯಾನಿಟರಿ ಇನ್ಸ್‌ಪೆಕ್ಟರ್ | 1 | 23500-47650 |
ಮಾಲಿ | 2 | 17000-28950 |
ಚೌಕಿದಾರ್ | 2 | 17000-28950 |
ಸಫಾಯಿವಾಲಾ | 8 | 17000-28950 |
ಕಾವಲುಗಾರ | 2 | 17000-28950 |
ಮಸ್ದೂರ್ | 1 | 17000-28950 |
ಶೈಕ್ಷಣಿಕ ಅರ್ಹತೆ :
• ಅಸಿಸ್ಟೆಂಟ್ ಸ್ಯಾನಿಟರಿ ಇನ್ಸ್‌ಪೆಕ್ಟರ್ – 10 ನೇ ತರಗತಿ ಪಾಸ್ ಮತ್ತು ಸ್ಯಾನಿಟರಿ ಹೆಲ್ತ್ ಇನ್ಸ್‌ಪೆಕ್ಟರ್ ಅಥವಾ ಹೆಲ್ತ್ ಇನ್ಸ್‌ಪೆಕ್ಟರ್ ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಹೊಂದಿರಬೇಕು.
ಅಥವಾ
ದ್ವಿತೀಯ ಪಿಯುಸಿ ಪಾಸ್ ಮತ್ತು ಸ್ಯಾನಿಟರಿ ಹೆಲ್ತ್ ಇನ್ಸ್‌ಪೆಕ್ಟರ್ ಅಥವಾ ಹೆಲ್ತ್ ಇನ್ಸ್‌ಪೆಕ್ಟರ್ ನಲ್ಲಿ ಎರಡು ವರ್ಷಗಳ ಡಿಪ್ಲೊಮಾ ಕೋರ್ಸ್ ಹೊಂದಿರಬೇಕು.
• ಮಾಲಿ, ಚೌಕಿದಾರ್, ಸಫಾಯಿವಾಲಾ, ಕಾವಲುಗಾರ, ಮಸ್ದೂರ್ – 10ನೇ ತರಗತಿ ಉತ್ತೀರ್ಣರಾಗಿರಬೇಕು.
ಉದ್ಯೋಗ ಮಾಹಿತಿ : ಭಾರತೀಯ ನೌಕಾಪಡೆ ನೇಮಕಾತಿ 2022
ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಯು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 1 : ಇಲಾಖೆಯ Official Site ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ Application Form Link ಮೇಲೆ ಕ್ಲಿಕ್ ಮಾಡಿ Application ಡೌನ್ಲೋಡ್ ಮಾಡಿಕೊಳ್ಳಿ.
ಹಂತ 2 : Application ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಪುನಃ ಒಮ್ಮೆ ಪರಿಶೀಲಿಸಿ.
ಹಂತ 3 : Application ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಲಗತ್ತಿಸಲು ಸೂಚಿಸಿದ್ದರೆ, ಅವುಗಳನ್ನು ಲಗತ್ತಿಸಿ (ಅಗತ್ಯವಿದ್ದರೆ ಮಾತ್ರ).
ಹಂತ 4 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ ಶುಲ್ಕ ಪಾವತಿಸಿ, ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಡೆ ನೀಡಲಾದ ಕಚೇರಿಯ ವಿಳಾಸಕ್ಕೆ ರೆಜಿಸ್ಟರ್/ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಿಬೇಕು.
ಅರ್ಜಿ ಸಲ್ಲಿಸುವ ವಿಳಾಸ : ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಕಂಟೋನ್ಮೆಂಟ್ ಬೋರ್ಡ್,
ಬಿಸಿ ನಂ. 41, ಖಾನಾಪುರ ರೋಡ್, Camp, ಬೆಳಗಾವಿ – 590001
ನಿಗಧಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 500 ಡಿಡಿಯನ್ನು “Chief Executive officer, Cantonment Board, Belgaum” ಇವರ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು. ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ನವೆಂಬರ್ 18, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಡಿಸೆಂಬರ್ 08, 2022
Cantonment Board Belgaum Recruitment 2022 : Important Links
NOTIFICATION & APPLICATION FORM | CLICK HERE |
Telegram Join Link | Click Here |
ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.
1 thought on “Cantonment Board Belgaum Recruitment 2022 – Apply for 16 Assistant Sanitary Inspector, Mali, Watchman Posts”
ಉದ್ಯೋಗ ತಿಳಿಸಿದಕ್ಕೆ ಧನ್ಯವಾದಗಳು ಸರ್ ಆದರೆ
ಆ ಯಾ ಇಲಾಖೆದವರು ಅಜಿ೯ ಹಾಕಿದ ನಂತರ ಅವರು ನಮ್ಮಗೆ ಏನೂ ತಿಳಿಯದ ಹಾಗೆ ನೇಮಕಾತಿ ಮಾಡಿಕೊಳ್ಳುತ್ತಾರೆ.