Cantonment Board Belgaum Recruitment 2022 – Apply Now 03 Stenographer, Mali Posts

Cantonment Board Belgaum Recruitment 2022 : ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ ಇದರಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ವಯೋಮಾನ, ವೇತನ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Cantonment Board Belgaum Recruitment 2022 : Details of Vacancies

ಹುದ್ದೆ : ಸ್ಟೆನೋಗ್ರಾಫರ್, ಅಸಿಸ್ಟೆಂಟ್ ಸ್ಯಾನಿಟರಿ ಇನ್ಸ್‌ಪೆಕ್ಟರ್, ಮಾಲಿ

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಬೆಳಗಾವಿಯಲ್ಲಿ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 03 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ ವೇತನ
ಸ್ಟೆನೋಗ್ರಾಫರ್127650-52650
ಅಸಿಸ್ಟೆಂಟ್ ಸ್ಯಾನಿಟರಿ ಇನ್ಸ್‌ಪೆಕ್ಟರ್123500-47650
ಮಾಲಿ117000-28950

ಶೈಕ್ಷಣಿಕ ಅರ್ಹತೆ :

ಸ್ಟೆನೋಗ್ರಾಫರ್ ಹುದ್ದೆಗೆ ದ್ವಿತೀಯ ಪಿಯುಸಿ ಉತ್ತೀರ್ಣತೆ ಜೊತೆಗೆ ಇಂಗ್ಲೀಷ್ ಹಿರಿಯ ದರ್ಜೆ ಶೀಘ್ರಲಿಪಿ ಹಾಗೂ ಟೈಪ್ ರೈಟಿಂಗ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅಥವಾ
10ನೇ ತರಗತಿ ಉತ್ತೀರ್ಣತೆ ಜೊತೆಗೆ 3 ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರ್ಯಾಕ್ಟಿಸ್ ಕೋರ್ಸ್ (ಇಂಗ್ಲೀಷ್) ಪಡೆದಿರಬೇಕು.
ಅಸಿಸ್ಟೆಂಟ್ ಸ್ಯಾನಿಟರಿ ಇನ್ಸ್‌ಪೆಕ್ಟರ್ ಹುದ್ದೆಗೆ 10 ನೇ ತರಗತಿ ಪಾಸ್ ಮತ್ತು ಸ್ಯಾನಿಟರಿ ಹೆಲ್ತ್ ಇನ್ಸ್‌ಪೆಕ್ಟರ್ ಅಥವಾ ಹೆಲ್ತ್ ಇನ್ಸ್‌ಪೆಕ್ಟರ್ ನಲ್ಲಿ ಮೂರು ವರ್ಷಗಳ ಡಿಪ್ಲೊಮಾ ಕೋರ್ಸ್ ಹೊಂದಿರಬೇಕು.
ಅಥವಾ
ದ್ವಿತೀಯ ಪಿಯುಸಿ ಪಾಸ್ ಮತ್ತು ಸ್ಯಾನಿಟರಿ ಹೆಲ್ತ್ ಇನ್ಸ್‌ಪೆಕ್ಟರ್ ಅಥವಾ ಹೆಲ್ತ್ ಇನ್ಸ್‌ಪೆಕ್ಟರ್ ನಲ್ಲಿ ಎರಡು ವರ್ಷಗಳ ಡಿಪ್ಲೊಮಾ ಕೋರ್ಸ್ ಹೊಂದಿರಬೇಕು.
ಮಾಲಿ ಹುದ್ದೆಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು.

ಉದ್ಯೋಗ ಮಾಹಿತಿ : ಜಿಲ್ಲಾ ನ್ಯಾಯಾಲಯದಲ್ಲಿ ನೇರ ನೇಮಕಾತಿ 2022

ವಯೋಮಾನ : ಅಭ್ಯರ್ಥಿಗಳಿಗೆ ಕನಿಷ್ಠ 21 ವರ್ಷ, ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.

ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ ನಲ್ಲಿ ಅಗತ್ಯವಿರುವ ಹುದ್ದೆಗೆ ಅರ್ಜಿ ಸಲ್ಲಿಕೆಯ ವಿಧಾನ :
• ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬೇಕು.
• ಅಭ್ಯರ್ಥಿಗಳು ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ ಇದರ ಅಧಿಕೃತ ವೆಬ್‌ಸೈಟ್ ವಿಳಾಸಕ್ಕೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ ನಂತರ ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ಮಾಹಿತಿಯನ್ನು ಭರ್ತಿ ಮಾಡಿ ( ಉದಾಹರಣೆಗೆ : ಅಭ್ಯರ್ಥಿಯ ಹೆಸರು, ವಿದ್ಯಾರ್ಹತೆ, ಇಮೇಲ್ ವಿಳಾಸ ಇತ್ಯಾದಿ) ಕೊನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಕಛೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವ ವಿಳಾಸ : ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಕಂಟೋನ್ಮೆಂಟ್ ಬೋರ್ಡ್,
ಬಿಸಿ ನಂ. 41, ಖಾನಾಪುರ ರೋಡ್, Camp, ಬೆಳಗಾವಿ – 590001

ನಿಗಧಿತ ಅರ್ಜಿ ಶುಲ್ಕದ ವಿವರ : ಅಭ್ಯರ್ಥಿಗಳು ರೂ. 500 ಡಿಡಿಯನ್ನು “Chief Executive officer, Cantonment Board, Belgaum” ಇವರ ಹೆಸರಿನಲ್ಲಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು. ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಜುಲೈ 30, 2022
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಸೆಪ್ಟೆಂಬರ್ 09, 2022

Cantonment Board Belgaum Recruitment 2022 : Important Links

Notification & Application Form Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

Leave a Comment