ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ 2024 – Central Bank of India Recruitment 2024

Central Bank of India Recruitment 2024 : ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕರ್ತವ್ಯ ಸ್ಥಳ, ಶೈಕ್ಷಣಿಕ ಅರ್ಹತೆ, ಅರ್ಜಿ ಸಲ್ಲಿಕೆ ದಿನಾಂಕ ಹಾಗೂ ಇತರೆ ಮಾಹಿತಿಯನ್ನು ಈ ಕೆಳಗಡೆ ವಿವರವಾಗಿ ನೀಡಲಾಗಿದೆ ಪೂರ್ತಿ ಓದಿ.

Central Bank of India Recruitment 2024 : Details of Vacancies

ಹುದ್ದೆ : ಚೀಫ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಭಾರತದೆಲ್ಲೆಡೆ ಬ್ಯಾಂಕುಗಳಲ್ಲಿ ಕೆಲಸ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 253 ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಹುದ್ದೆಹುದ್ದೆಗಳ ಸಂಖ್ಯೆ
ಚೀಫ್ ಮ್ಯಾನೇಜರ್10
ಸೀನಿಯರ್ ಮ್ಯಾನೇಜರ್56
ಮ್ಯಾನೇಜರ್162
ಅಸಿಸ್ಟಂಟ್ ಮ್ಯಾನೇಜರ್25

ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಬಿಇ/ ಬಿ.ಟೆಕ್/ ಎಂಸಿಎ/ ಪದವಿ / ಸ್ನಾತಕೋತ್ತರ ಪದವಿ ಹೊಂದಿರಬೇಕು.

ಉದ್ಯೋಗ ಮಾಹಿತಿ : ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ 2024

ವಯೋಮಾನ : ಅಭ್ಯರ್ಥಿಗಳು ದಿನಾಂಕ 01/10/2024ಕ್ಕೆ
• ಚೀಫ್ ಮ್ಯಾನೇಜರ್ – ಕನಿಷ್ಠ 34 ವರ್ಷ, ಗರಿಷ್ಠ 40 ವರ್ಷ
• ಸೀನಿಯರ್ ಮ್ಯಾನೇಜರ್ – ಕನಿಷ್ಠ 30 ವರ್ಷ, ಗರಿಷ್ಠ 38 ವರ್ಷ
• ಮ್ಯಾನೇಜರ್ – ಕನಿಷ್ಠ 27 ವರ್ಷ, ಗರಿಷ್ಠ 33 ವರ್ಷ
• ಅಸಿಸ್ಟಂಟ್ ಮ್ಯಾನೇಜರ್ – ಕನಿಷ್ಠ 23 ವರ್ಷ, ಗರಿಷ್ಠ 27 ವರ್ಷ

ವಯೋಮಿತಿ ಸಡಿಲಿಕೆ :
• ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 3 ವರ್ಷ
• ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – 10 ವರ್ಷ

ವೇತನ :

ಹುದ್ದೆವೇತನ
ಚೀಫ್ ಮ್ಯಾನೇಜರ್102300-120940
ಸೀನಿಯರ್ ಮ್ಯಾನೇಜರ್85920-105280
ಮ್ಯಾನೇಜರ್64820-93960
ಅಸಿಸ್ಟಂಟ್ ಮ್ಯಾನೇಜರ್48480-85920

ಆಯ್ಕೆ ವಿಧಾನ : on-line platform test/ Scenario based test ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಆಯ್ಕೆ ಮಾಡಲಾಗುವುದು.

ಉದ್ಯೋಗ ಮಾಹಿತಿ : ನಾರ್ಥ್ ವೆಸ್ಟರ್ನ್ ರೈಲ್ವೆ ನೇಮಕಾತಿ 2024

ಅರ್ಜಿ ಸಲ್ಲಿಕೆಯ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು
ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
ಹಂತ 2 : ಬ್ಯಾಂಕಿನ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).
ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ಅರ್ಜಿ ಶುಲ್ಕ :
• ಪ.ಜಾತಿ/ ಪ.ಪಂ./ ಪಿಡಬ್ಲ್ಯೂಡಿ/ ಮಹಿಳಾ ಅಭ್ಯರ್ಥಿಗಳು – ರೂ. 175+ಜಿ.ಎಸ್.ಟಿ
• ಉಳಿದ ಅಭ್ಯರ್ಥಿಗಳು – ರೂ. 850+ಜಿ.ಎಸ್.ಟಿ

ಶುಲ್ಕ ಪಾವತಿಸುವ ವಿಧಾನ : ನಿಗದಿಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಪಾವತಿಸಬಹುದು

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕದ ವಿವರ :
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ನವೆಂಬರ್ 18, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಡಿಸೆಂಬರ್ 03, 2024
ಆನ್‌ಲೈನ್‌ ಪರೀಕ್ಷೆ ನಡೆಯುವ ದಿನಾಂಕ : ಡಿಸೆಂಬರ್ 14, 2024
ಸಂದರ್ಶನ ನಡೆಯುವ ದಿನಾಂಕ (ತಾತ್ಕಾಲಿಕ) : ಜನವರಿ 2ನೇ ವಾರ, 2025

Central Bank of India Specialist Officer Recruitment 2024 : Important Links

NOTIFICATION CLICK HERE
APPLY ONLINE CLICK HERE
Telegram Join Link Click Here
WhatsApp Group Link Click Here

ಕೊನೆಯ ಪದಗಳು : ನಾವು ನೀಡಿದ ಉದ್ಯೋಗ ಮಾಹಿತಿಯನ್ನು ನೀವು ಇಷ್ಟಪಡುತ್ತೀರಿ ಎಂದು ಭಾವಿಸುತ್ತೇವೆ. ಈ ಉದ್ಯೋಗ ಮಾಹಿತಿ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೆ ಶೇರ್ ಮಾಡಲು ಮರೆಯದಿರಿ.

WhatsApp
Telegram
Facebook

Leave a Comment